ADVERTISEMENT

ಕದನ ವಿರಾಮಕ್ಕೆ ಭಾರತ–ಪಾಕಿಸ್ತಾನ ಒಪ್ಪಿದೆ ಎಂದ ಡೊನಾಲ್ಡ್‌ ಟ್ರಂಪ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಮೇ 2025, 12:29 IST
Last Updated 10 ಮೇ 2025, 12:29 IST
ಡೊನಾಲ್ಡ್‌ ಟ್ರಂಪ್‌
ಡೊನಾಲ್ಡ್‌ ಟ್ರಂಪ್‌   

ವಾಷಿಂಗ್ಟನ್‌: ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಪರಸ್ಪರ ಸಮ್ಮತಿಸಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಹೇಳಿದ್ದಾರೆ.

ಈ ಬಗ್ಗೆ ಅವರು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

‘ಅಮೆರಿಕದ ಮಧ್ಯಸ್ಥಿಕೆಯಲ್ಲಿ ರಾತ್ರಿಯಿಡಿ ನಡೆದ ಸುದೀರ್ಘ ಮಾತುಕತೆಯ ನಂತರ ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಬುದ್ದಿವಂತಿಕೆಯ ನಿರ್ಧಾರ ತೆಗೆದುಕೊಂಡ ಉಭಯ ದೇಶಗಳಿಗೆ ಅಭಿನಂದನೆಗಳು’ ಎಂದು ತಿಳಿಸಿದ್ದಾರೆ.

ADVERTISEMENT

ಈ ಬಗ್ಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ ವಿದೇಶಾಂಗ ಸಚಿವ ಇಸಾಕ್‌ ದಾರ್‌, ಪಾಕಿಸ್ತಾನ ಮತ್ತು ಭಾರತ ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಪಾಕಿಸ್ತಾನವು ತನ್ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಧಕ್ಕೆಯಾಗದಂತೆ ಈ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಗಾಗಿ ಶ್ರಮಿಸುತ್ತಿದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.