ರಾಬರ್ಟ್ ಫ್ರಾನ್ಸಿಸ್ ಪ್ರಿವೊಸ್ಟ್ (ಲಿಯೊ 14)
ವ್ಯಾಟಿಕನ್ ಸಿಟಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದವನ್ನು ರೋಮನ್ ಕ್ಯಾಥೋಲಿಕ್ ಚರ್ಚ್‌ನ ನೂತನ ಪೋಪ್ ರಾಬರ್ಟ್ ಫ್ರಾನ್ಸಿಸ್ ಪ್ರಿವೊಸ್ಟ್ (ಲಿಯೊ 14) ಸ್ವಾಗತಿಸಿದ್ದಾರೆ.
ಭಾರತ–ಪಾಕಿಸ್ತಾನ ಬಿಕ್ಕಟ್ಟು ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದ್ವಿಪಕ್ಷೀಯ ಮಾತುಕತೆಗಳು ಶಾಶ್ವತವಾಗಿ ಶಾಂತಿ ನೆಲೆಸಲು ಕಾರಣವಾಗುತ್ತವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಭಾರತದ ಸಶಸ್ತ್ರ ಪಡೆಗಳು ‘ಆಪರೇಷನ್ ಸಿಂಧೂರ’ದ ಮೂಲಕ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಗಡಿಯಲ್ಲಿ ಎರಡೂ ದೇಶಗಳ ನಡುವೆ ಸೇನಾ ಸಂಘರ್ಷ ತೀವ್ರಗೊಂಡಿದೆ.
ಯುದ್ಧದ ಸ್ವರೂಪದ ಸಂಘರ್ಷ ಕೊನೆಗೊಳಿಸಲು ಶನಿವಾರ ಸಂಜೆ 5 ಗಂಟೆಯಿಂದ ಅನ್ವಯವಾಗುವಂತೆ ಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಒಪ್ಪಿರುವುದಾಗಿ ವಿದೇಶಾಂಗ ಸಚಿವಾಲಯ ಘೋಷಿಸಿತ್ತು. ಆದರೆ, ಶನಿವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ರಾಜಸ್ಥಾನ ಮತ್ತು ಗುಜರಾತ್ ಗಡಿಪ್ರದೇಶಗಳಲ್ಲಿ ಡ್ರೋನ್ ದಾಳಿಗೆ ಪಾಕ್ ಯತ್ನ ನಡೆಸಿದ್ದು, ಭಾರತ ತಕ್ಕ ಪ್ರತ್ಯುತ್ತರ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.