ವಿಶ್ವಸಂಸ್ಥೆ: ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಹದಗೆಟ್ಟಿರುವ ನಡುವೆ ಈ ಕುರಿತು ಚರ್ಚೆ ನಡೆಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ರಹಸ್ಯ ಸಮಾಲೋಚನೆ ಸಭೆ ಆರಂಭಿಸಿದೆ.
ಪರಮಾಣು ಶಸ್ತ್ರಸಜ್ಜಿತ ಉಭಯ ದೇಶಗಳ ನಡುವಿನ ಉದ್ವಿಗ್ನತೆ ವರ್ಷಗಳಲ್ಲಿಯೇ ಎತ್ತರದ ಮಟ್ಟಕ್ಕೆ ತಲುಪಿದೆ ಎಂದು ವಿಶ್ವಸಂಸ್ಥೆ ಮಹಾಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಕಳವಳ ವ್ಯಕ್ತಪಡಿಸಿದ್ದಾರೆ.
ಭದ್ರತಾ ಮಂಡಳಿಯ 15 ಕಾಯಂ ಸದಸ್ಯ ರಾಷ್ಟ್ರಗಳ ಪಟ್ಟಿಯಲ್ಲಿರುವ ಪಾಕಿಸ್ತಾನ, ಪರಿಸ್ಥಿತಿಯ ಕುರಿತು ರಹಸ್ಯ ಸಮಾಲೋಚನೆ ನಡೆಸುವಂತೆ ಕೋರಿತ್ತು.
ರಾಜಕೀಯ, ಶಾಂತಿ ನಿರ್ಮಾಣ ಮತ್ತು ಶಾಂತಿ ಕಾರ್ಯಾಚರಣೆಗಳ ಇಲಾಖೆಗಳಲ್ಲಿ ಮಧ್ಯಪ್ರಾಚ್ಯ, ಏಷ್ಯಾ ಮತ್ತು ಪೆಸಿಫಿಕ್‌ನ ರಾಷ್ಟ್ರಗಳ ಸಹಾಯಕ ಪ್ರಧಾನ ಕಾರ್ಯದರ್ಶಿ ಟುನೀಶಿಯಾದ ಖಲೀದ್ ಮೊಹಮ್ಮದ್ ಖಿಯಾರಿ ಎರಡೂ ಇಲಾಖೆಗಳ (ಡಿಪಿಪಿಎ ಮತ್ತು ಡಿಪಿಒ) ಪರವಾಗಿ ಮಂಡಳಿಗೆ ಮಾಹಿತಿ ನೀಡಲಿದ್ದಾರೆ.
ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಕಾಯಂ ಪ್ರತಿನಿಧಿ ರಾಯಭಾರಿ ಅಸಿಮ್ ಇಫ್ತಿಕರ್ ಅಹ್ಮದ್ ಸಭೆಯ ನಂತರ ವರದಿಗಾರರಿಗೆ ಮಾಹಿತಿ ನೀಡಬಹುದು ಎಂದು ಹೇಳಲಾಗಿದೆ.
ಅಣ್ವಸ್ತ್ರ ಬಲ ಹೊಂದಿರುವ ಭಾರತ ಮತ್ತು ಪಾಕಿಸ್ತಾನ ದೇಶಗಳು ಈ ಸಂದರ್ಭದಲ್ಲಿ ಗರಿಷ್ಠ ಸಂಯಮ ಕಾಯ್ದುಕೊಳ್ಳಬೇಕು ಎಂದು ಗುಟೆರಸ್ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.