ವಿಶ್ವಸಂಸ್ಥೆ: ಭಾರತದ ರಾಷ್ಟ್ರೀಯ ಹಿತಾಸಕ್ತಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸ್ವತಂತ್ರ ವಿದೇಶಿ ನೀತಿಯನ್ನು ರಷ್ಯಾ ಗೌರವಿಸುತ್ತದೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗಿ ಲಾವ್ರೊವ್ ಅವರು ತಿಳಿಸಿದ್ದಾರೆ.
ಅಮೆರಿಕ ಅಥವಾ ಇತರ ದೇಶದೊಂದಿಗೆ ಭಾರತ ಹೊಂದಿರುವ ಸಂಬಂಧವು ರಷ್ಯಾದೊಂದಿಗಿನ ಬಾಂಧವ್ಯಕ್ಕೆ ಮಾನದಂಡವಾಗುವುದಿಲ್ಲ. ಉಭಯ ದೇಶಗಳು ಉತ್ತಮ ಸಂಬಂಧ ಹೊಂದಿವೆ ಎಂದು ಅವರು ಹೇಳಿದ್ದಾರೆ.
ವಿಶ್ವಸಂಸ್ಥೆಯ ಸಾಮಾನ್ಯಸಭೆ ಉದ್ದೇಶಿಸಿ ಮಾತನಾಡಿದ ಅವರು, ಭಾರತ ಮತ್ತು ರಷ್ಯಾವು ಕಾರ್ಯತಂತ್ರದ ಪಾಲುದಾರಿಕೆ ಹೊಂದಿವೆ ಎಂದರು.
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಡಿಸೆಂಬರ್‌ನಲ್ಲಿ ಭಾರತಕ್ಕೆ ಬರುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.