ADVERTISEMENT

ಇಸ್ರೇಲ್‌ನಲ್ಲಿ ಉದ್ವಿಗ್ನ ಪರಿಸ್ಥಿತಿ: ಭಾರತೀಯರಿಗೆ ಮುನ್ನೆಚ್ಚರಿಕೆ ವಹಿಸಲು ಸಲಹೆ

ಪಿಟಿಐ
Published 16 ಜನವರಿ 2026, 14:03 IST
Last Updated 16 ಜನವರಿ 2026, 14:03 IST
.
.   

ಜೆರುಸಲೇಂ: ಇಸ್ರೇಲ್‌ನಲ್ಲಿ ಉದ್ವಿಗ್ನ ಪರಿಸ್ಥಿತಿ ಉಲ್ಬಣಗೊಂಡಿರುವುದರಿಂದ ಭಾರತೀಯ ನಾಗರಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮತ್ತು ಅನಗತ್ಯ ಪ್ರಯಾಣ ಕೈಬಿಡುವಂತೆ ಭಾರತದ ರಾಯಭಾರ ಕಚೇರಿ ಸಲಹೆ ನೀಡಿದೆ.

ಅಮೆರಿಕ ಮತ್ತು ಬ್ರಿಟನ್‌ ರಾಯಭಾರ ಕಚೇರಿಗಳು ಕೂಡ ತಮ್ಮ ದೇಶದ ನಾಗರಿಕರಿಗೆ ಸುರಕ್ಷಿತವಾಗಿರುವಂತೆ ಸಲಹೆ ನೀಡಿವೆ.

ಇಸ್ರೇಲ್‌ನಲ್ಲಿ ನೆಲಸಿರುವ ನಾಗರಿಕರು ಅಲ್ಲಿನ ಅಧಿಕಾರಿಗಳು ಹೊರಡಿಸಿರುವ ಸುರಕ್ಷತಾ ಮಾರ್ಗಸೂಚಿಗಳು ಮತ್ತು ಶಿಷ್ಟಾಚಾರಗಳನ್ನು ಪಾಲಿಸಬೇಕು ಮತ್ತು ಭಾರತೀಯರು ಇಸ್ರೇಲ್‌ಗೆ ಅನಗತ್ಯ ಪ್ರಯಾಣವನ್ನು ತಪ್ಪಿಸಬೇಕು ಎಂದು ಭಾರತದ  ರಾಯಭಾರ ಕಚೇರಿ ತಿಳಿಸಿದೆ.  

ADVERTISEMENT

ತುರ್ತು ಸಹಾಯಕ್ಕಾಗಿ ಭಾರತೀಯ ರಾಯಭಾರ ಕಚೇರಿಯ ಸಹಾಯವಾಣಿ +972-54-7520711, +972-54-3278392 ಗೆ ಸಂಪರ್ಕಿಸಬಹುದು ಎಂದು ಸಾಮಾಜಿಕ ಜಾಲತಾಣಗಳು ಮತ್ತು ಅಧಿಕೃತ ವೆಬ್‌ಸೈಟ್‌ನಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.