
ಭಾರತ, ಅಮೆರಿಕ
ವಾಷಿಂಗ್ಟನ್: ಅಮೆರಿಕದಲ್ಲಿರುವ ಭಾರತದ ರಾಯಭಾರಿ ವಿನಯ್ ಮೋಹನ ಕ್ವಾತ್ರಾ ಅವರು ಸೆನೆಟರ್ ಸ್ಟೀವ್ ಡೇನ್ಸ್ ಅವರೊಂದಿಗೆ ದ್ವಿಪಕ್ಷೀಯ ಒಪ್ಪಂದಗಳ ಕುರಿತು ಮಾತುಕತೆ ನಡೆಸಿದ್ದಾರೆ.
ಸಭೆಯಲ್ಲಿ ದ್ವಿಪಕ್ಷೀಯ ವ್ಯಾಪಾರದ ಬಗ್ಗೆ ಚರ್ಚಿಸಲಾಯಿತು.
ಉಭಯ ದೇಶಗಳು 10 ವರ್ಷಗಳ ಅವಧಿಯಲ್ಲಿ ರಕ್ಷಣಾ ವ್ಯವಸ್ಥೆ ಸುಧಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ರೂಪುರೇಷೆ ತಯಾರಿಸಿದ್ದು, ಆ ಬಗ್ಗೆ ಒಪ್ಪಂದ ಮಾಡಿಕೊಂಡಿವೆ. ಈ ವಿಷಯವಾಗಿಯೂ ಸಂವಾದ ನಡೆಸಿದ್ದಾರೆ.
‘ಭಾರತ ಮತ್ತು ಅಮೆರಿಕ ನಡುವಿನ ಸಂಬಂಧ ಬಲಪಡಿಸಲು ಸ್ಟೀವ್ ಡೇನ್ಸ್ ಬೆಂಬಲ ನೀಡಿದ್ದಾರೆ. ಪ್ರಸ್ತುತ ಇರುವ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಮತ್ತು ಉಭಯ ದೇಶಗಳ ನಡುವಿನ ತಂತ್ರಜ್ಞಾನ–ನಾವೀನ್ಯ ಕುರಿತು ಚರ್ಚಿಸಲಾಗಿದೆ’ ಎಂದು ಕ್ವಾತ್ರಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಬುಧವಾರ ತಿಳಿಸಿದ್ದಾರೆ.
ರಕ್ಷಣಾ ಹಾಗೂ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ಉಭಯ ದೇಶಗಳು ಕಳೆದ ವಾರ ಸಹಿ ಹಾಕಿದ್ದವು. ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಇದು ದ್ವಿಪಕ್ಷೀಯ ಸಂಬಂಧಗಳು ಬೆಳೆಯುತ್ತಿರುವುದರ ‘ಸಂಕೇತ’ ಎಂದು ಬಣ್ಣಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.