ಮೆರಿಕದ ಅಧೀನ ಕಾರ್ಯದರ್ಶಿ ಜೆಫ್ರಿ ಕೆಸ್ಲರ್ ಹಾಗೂ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ
– ಎಕ್ಸ್ ಚಿತ್ರ
ನ್ಯೂಯಾರ್ಕ್ / ವಾಷಿಂಗ್ಟನ್: ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿಯವರು ಅಮೆರಿಕದ ಅಧೀನ ಕಾರ್ಯದರ್ಶಿ ಜೆಫ್ರಿ ಕೆಸ್ಲರ್ ಅವರನ್ನು ವಾಷಿಂಗ್ಟನ್‌ನಲ್ಲಿ ಭೇಟಿಯಾಗಿದ್ದಾರೆ.
ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ದ್ವಿಪಕ್ಷೀಯ ಸಹಕಾರದ ಬಗ್ಗೆ ಮಾತುಕತೆ ನಡೆದಿದೆ ಎಂದು ವಾಷಿಂಗ್ಟನ್‌ನಲ್ಲಿರುವ ಭಾರತದ ರಾಯಭಾರ ಕಚೇರಿ ತಿಳಿಸಿದೆ.
ಮೇ 27 ರಿಂದ 29ರವರೆಗೆ ವಾಷಿಂಗ್ಟನ್‌ನಲ್ಲಿ ಇರಲಿರುವ ಮಿಸ್ರಿ, ಅಮೆರಿಕ ಆಡಳಿತದ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ.
2025ರ ಫೆಬ್ರುವರಿಯಲ್ಲಿ ಅಮೆರಿಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದರು. ಮಿಸ್ರಿಯವರ ಭೇಟಿ ಅದರ ಮುಂದುವರಿದ ಭಾಗವಾಗಿದೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.
‘ತಂತ್ರಜ್ಞಾನ ಮತ್ತು ವ್ಯಾಪಾರ ಸಹಯೋಗ ಹೆಚ್ಚಳಕ್ಕೆ ಭಾರತ-ಅಮೆರಿಕ ಕಾರ್ಯತಂತ್ರದ ವ್ಯಾಪಾರ ಸಂವಾದ ಸದ್ಯದಲ್ಲೇ ಆಯೋಜಿಸುವ ಬಗ್ಗೆಯೂ ಉಭಯ ಅಧಿಕಾರಿಗಳು ಚರ್ಚಿಸಿದ್ದಾರೆ ಎಂದು ರಾಯಭಾರ ಕಚೇರಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.