ADVERTISEMENT

ಭಾರತದ ಸಂಬಂಧ ಅಮೆರಿಕಕ್ಕೆ ನಿರ್ಣಾಯಕ: ಮಾರ್ಕೊ ರುಬಿಯೊ

ಪಿಟಿಐ
Published 23 ಸೆಪ್ಟೆಂಬರ್ 2025, 3:53 IST
Last Updated 23 ಸೆಪ್ಟೆಂಬರ್ 2025, 3:53 IST
<div class="paragraphs"><p>ಭಾರತೀಯ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಮತ್ತು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ</p></div>

ಭಾರತೀಯ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಮತ್ತು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ

   

ಚಿತ್ರ ಕೃಪೆ:  @DrSJaishankar

ನ್ಯೂಯಾರ್ಕ್‌: ಭಾರತದ ಸಂಬಂಧ ಅಮೆರಿಕಕ್ಕೆ ನಿರ್ಣಾಯಕವಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅಭಿಪ್ರಾಯಪಟ್ಟಿದ್ದಾರೆ.

ADVERTISEMENT

ಭಾರತೀಯ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಭೇಟಿಯ ನಂತರ ರುಬಿಯೊ ಈ ಹೇಳಿಕೆ ನೀಡಿದ್ದಾರೆ.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಉನ್ನತ ಮಟ್ಟದ ಸಭೆಯಲ್ಲಿ ಭಾಗಿಯಾದ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ.

ಭಾರತದ ಸಂಬಂಧ ಅಮೆರಿಕಕ್ಕೆ ನಿರ್ಣಾಯಕವಾಗಿದೆ ಎಂದಿರುವ ರುಬಿಯೊ, ವ್ಯಾಪಾರ, ರಕ್ಷಣೆ, ಇಂಧನ, ಔಷಧಗಳು, ಪ್ರಮುಖ ಖನಿಜಗಳು ಮತ್ತು ದ್ವಿಪಕ್ಷೀಯ ಸಂಬಂಧ ಸೇರಿದಂತೆ ಹಲವು ವಿಷಯಗಳಲ್ಲಿ ಭಾರತ ಸರ್ಕಾರದ ನಿರಂತರ ಪಾಲ್ಗೊಳ್ಳುವಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕ್ವಾಡ್ ಮೂಲಕವೂ ಸೇರಿದಂತೆ ಇಂಡೋ-ಪೆಸಿಫಿಕ್ ಪ್ರದೇಶವನ್ನು ಉತ್ತೇಜಿಸಲು ಅಮೆರಿಕ ಮತ್ತು ಭಾರತ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತವೆ ಎಂದು ರುಬಿಯೊ ಮತ್ತು ಜೈಶಂಕರ್ ಒಪ್ಪಿಕೊಂಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಜೈಶಂಕರ್, ‘ದ್ವಿಪಕ್ಷೀಯ ಮತ್ತು ಅಂತರರಾಷ್ಟ್ರೀಯ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದ್ದೇವೆ. ಆದ್ಯತೆಯ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲು ನಿರಂತರ ಸಂಪರ್ಕದಲ್ಲಿರುತ್ತೇವೆ’ ಎಂದು ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.