ADVERTISEMENT

ಕ್ವಾತ್ರಾ–ಇಂಟೆಲ್‌ ಸಿಇಒ ಸಂವಾದ

ಪಿಟಿಐ
Published 9 ನವೆಂಬರ್ 2025, 13:52 IST
Last Updated 9 ನವೆಂಬರ್ 2025, 13:52 IST
.
.   

ನ್ಯೂಯಾರ್ಕ್ : ಅಮೆರಿಕದಲ್ಲಿನ ಭಾರತದ ರಾಯಭಾರಿ ವಿನಯ್‌ ಮೋಹನ್‌ ಕ್ವಾತ್ರಾ ಅವರು ಇಂಟೆಲ್‌ ಸಿಇಒ ಲಿಪ್‌ ಬು ಟಾನ್‌ ಅವರೊಂದಿಗೆ ಕಂಪನಿಯ ಸೆಮಿಕಂಡಕ್ಟರ್‌, ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಕೆ ಮತ್ತು ಭಾರತದಲ್ಲಿನ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು.

ಕೇಂದ್ರ ಸರ್ಕಾರವು ಸೆಮಿಕಂಡಕ್ಟರ್ ಮತ್ತು ಎಐ ಕೈಗಾರಿಕೆಗಳಿಗೆ ವಿಶೇಷ ಪ್ರೋತ್ಸಾಹ ಕ್ರಮಗಳನ್ನು ಕೈಗೊಂಡಿರುವಾಗಲೇ ಉಭಯ ನಾಯಕರು ಶನಿವಾರ ಆನ್‌ಲೈನ್‌ ಮೂಲಕ ಸಂವಾದ ನಡೆಸಿದರು. 

ಭಾರತವು ಮುಂದಿನ ವರ್ಷ ಫೆಬ್ರುವರಿಯಲ್ಲಿ ‘ಕೃತಕ ಬುದ್ಧಿಮತ್ತೆ ಶೃಂಗ’ದ ಆತಿಥ್ಯ ವಹಿಸಲು ಸಿದ್ಧತೆ ನಡೆಸುತ್ತಿರುವಾಗಲೇ ಈ ಚರ್ಚೆ ನಡೆದಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.