ADVERTISEMENT

ಭಾರತದೊಂದಿಗೆ ವ್ಯಾಪಾರ ಒಪ್ಪಂದ; ಬಹಳ ಹತ್ತಿರದಲ್ಲಿದ್ದೇವೆ: ಟ್ರಂಪ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಜುಲೈ 2025, 3:05 IST
Last Updated 8 ಜುಲೈ 2025, 3:05 IST
<div class="paragraphs"><p>ನರೇಂದ್ರ ಮೋದಿ, ಡೊನಾಲ್ಡ್ ಟ್ರಂಪ್</p></div>

ನರೇಂದ್ರ ಮೋದಿ, ಡೊನಾಲ್ಡ್ ಟ್ರಂಪ್

   

(ಪಿಟಿಐ ಸಂಗ್ರಹ ಚಿತ್ರ)

ವಾಷಿಂಗ್ಟನ್: ಭಾರತದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಸಂಬಂಧ ಮಗದೊಮ್ಮೆ ಹೇಳಿಕೆ ನೀಡಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಬಹಳ ಹತ್ತಿರದಲ್ಲಿದ್ದೇವೆ ಎಂದು ತಿಳಿಸಿದ್ದಾರೆ.

ADVERTISEMENT

'ನಾವು ಈಗಾಗಲೇ ಬ್ರಿಟನ್ ಹಾಗೂ ಚೀನಾದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಭಾರತದೊಂದಿಗೂ ನಿಕಟ ಹಂತದಲ್ಲಿದ್ದೇವೆ' ಎಂದು ಅವರು ವಾಷಿಂಗ್ಟನ್‌ನಲ್ಲಿ ತಿಳಿಸಿದ್ದಾರೆ.

ಜಪಾನ್, ದಕ್ಷಿಣ ಕೊರಿಯಾ ಸೇರಿದಂತೆ 14 ರಾಷ್ಟ್ರಗಳ ಮೇಲೆ ಟ್ರಂಪ್ ಸುಂಕ ಘೋಷಿಸಿದ್ದರು. ಈ ನೀತಿ ಆಗಸ್ಟ್ 1ಕ್ಕೆ ಜಾರಿಯಾಗಲಿದೆ.

'ನಾವು ಬೇರೆ ದೇಶಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಅಂದುಕೊಂಡಿದ್ದೇನೆ. ಹಾಗಾಗಿ ಕೆಲವು ದೇಶಗಳಿಗೆ ಸುಂಕ ವಿಧಿಸುವ ಆದೇಶ ಪತ್ರಗಳನ್ನು ಕಳುಹಿಸಿದ್ದೇವೆ. ಇನ್ನು ಕೆಲವು ದೇಶಗಳೊಂದಿಗೆ ಸ್ವಲ್ಪ ಹೊಂದಾಣಿಕೆಯಾಗಬಹುದು' ಎಂದು ಟ್ರಂಪ್ ಹೇಳಿದ್ದಾರೆ.

ಈ ಮೊದಲು ಭಾರತದೊಂದಿಗಿನ 'ಅತಿ ದೊಡ್ಡ' ವ್ಯಾಪಾರ ಒಪ್ಪಂದ ಅಂತಿಮ ಹಂತದಲ್ಲಿದೆ ಎಂದು ಟ್ರಂಪ್ ಹೇಳಿಕೆ ನೀಡಿದ್ದರು. ಆ ಮೂಲಕ ಉಭಯ ದೇಶಗಳ ನಡುವಿನ ಬಹುನಿರೀಕ್ಷಿತ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಮಾತುಕತೆ ಪ್ರಕ್ರಿಯೆಯಲ್ಲಿ ಮಹತ್ವದ ಪ್ರಗತಿ ಸಾಧಿಸಿರುವ ಸುಳಿವು ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.