ADVERTISEMENT

ಭಾರತ-ಅಮೆರಿಕ ನಡುವೆ ವ್ಯಾಪಾರ ಒಪ್ಪಂದ: ಮಾತುಕತೆ ಆರಂಭ

ಪಿಟಿಐ
Published 16 ಸೆಪ್ಟೆಂಬರ್ 2025, 7:21 IST
Last Updated 16 ಸೆಪ್ಟೆಂಬರ್ 2025, 7:21 IST
<div class="paragraphs"><p>ಅಮೆರಿಕ-ಭಾರತ</p></div>

ಅಮೆರಿಕ-ಭಾರತ

   

(ಐಸ್ಟೋಕ್ ಚಿತ್ರ)

ನವದೆಹಲಿ: ಭಾರತ ಹಾಗೂ ಅಮೆರಿಕ ನಡುವೆ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಸಂಬಂಧ ಮಾತುಕತೆ ಇಂದು (ಮಂಗಳವಾರ) ಆರಂಭಗೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದ ಮುಖ್ಯ ಸಮಾಲೋಚಕ ಬ್ರೆಂಡನ್ ಲಿಂಚ್ ಸೋಮವಾರ ರಾತ್ರಿ ಭಾರತಕ್ಕೆ ಆಗಮಿಸಿದ್ದರು.

ಭಾರತದ ಮುಖ್ಯ ಸಮಾಲೋಚಕ ಮತ್ತು ವಾಣಿಜ್ಯ ಸಚಿವಾಲಯದ ವಿಶೇಷ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಅವರೊಂದಿಗೆ ದಿನವಿಡೀ ಮಾತುಕತೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬ್ರೆಂಡನ್ ಲಿಂಚ್ ಅವರು ದಕ್ಷಿಣ ಮತ್ತು ಮಧ್ಯ ಏಷ್ಯಾದ ಅಮೆರಿಕದ ಸಹಾಯಕ ವ್ಯಾಪಾರ ಪ್ರತಿನಿಧಿಯಾಗಿದ್ದಾರೆ.

ಭಾರತದ ಮೇಲೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕ ಸುಂಕ ಹೇರಿದ್ದರಿಂದ ಉಭಯ ರಾಷ್ಟ್ರಗಳ ನಡುವಣ ವ್ಯಾಪಾರ ಒಪ್ಪಂದ ಏರ್ಪಡುವುದರಲ್ಲಿ ಅನಿಶ್ಚಿತತೆ ಉಂಟಾಗಿತ್ತು.

ರಷ್ಯಾದಿಂದ ತೈಲ ಖರೀದಿಗೆ ದಂಡ ಸೇರಿದಂತೆ ಭಾರತೀಯ ಸರಕುಗಳ ಮೇಲೆ ಅಮೆರಿಕ ಶೇ 50ರಷ್ಟು ಆಮದು ಸುಂಕ ವಿಧಿಸಿದ್ದರಿಂದ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಮೇಲೆ ಪರಿಣಾಮ ಬೀರಿತ್ತು. ಯಾವುದೇ ಕಾರಣಕ್ಕೂ ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಭಾರತ ಪ್ರತಿಕ್ರಿಯಿಸಿತ್ತು.

ಅದಾದ ಬಳಿಕ ಟ್ರಂಪ್ ಸಕಾರಾತ್ಮಕ ಮಾತುಕಗಳನ್ನಾಡಿದ್ದರು. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹ ಧನಾತ್ಮಕವಾಗಿ ಪ್ರತಿಕ್ರಿಯಿಸಿದ್ದರು.

ಈವರೆಗೆ ಭಾರತ-ಅಮೆರಿಕ ದ್ವಿಪಕ್ಷೀಯ ವ್ಯಾಪಾರ ಒಪ್ಪಂದಗಳಿಗಾಗಿ (ಬಿಟಿಎ) ಐದು ಸುತ್ತಿನ ಮಾತುಕತೆಗಳು ನಡೆದಿವೆ. ಆರನೇ ಸುತ್ತಿನ ಮಾತುಕತೆ ಆಗಸ್ಟ್ 25ರಿಂದ 29ರವರೆಗೆ ನಿಗದಿಯಾಗಿತ್ತು. ಆದರೆ ಭಾರತದ ಮೇಲೆ ಅಮೆರಿಕ ಶೇ 50ರಷ್ಟು ಸುಂಕ ವಿಧಿಸಿದ್ದರಿಂದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.