ಹನೋಯಿ: ಭಾರತ ಮತ್ತು ವಿಯೆಟ್ನಾಂ ದ್ವಿಪಕ್ಷೀಯ ಮಿಲಿಟರಿ ಸಹಕಾರ ಒಪ್ಪಂದಕ್ಕೆ ಬುಧವಾರ ಸಹಿ ಹಾಕಿವೆ. ಈ ಮೂಲಕ ಇದೇ ಮೊದಲ ಬಾರಿಗೆ ವಿಯೆಟ್ನಾಂ ಬೇರೊಂದು ದೇಶದೊಂದಿಗೆ ಮಿಲಿಟರಿ ಸಹಕಾರ ಪ್ರಕ್ರಿಯೆಯನ್ನು ಸರಳಗೊಳಿಸುವ ಒಪ್ಪಂದ ಮಾಡಿಕೊಂಡಿದೆ.
ಇದೇ ವೇಳೆ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧವನ್ನು ವೃದ್ಧಿಸುವ ಹಲವು ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.
ಮೂರು ದಿನಗಳ ಕಾಲ ಇಲ್ಲಿಗೆ ಭೇಟಿ ನೀಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಾತುಕತೆ ನಡೆಸಿದ ಬೆನ್ನಲ್ಲೇ ಈ ಒಪ್ಪಂದ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.