ಹ್ಯೂಸ್ಟನ್:ಹವಾಮಾನ ಬದಲಾವಣೆ ಮತ್ತು ಸುಸ್ಥಿರತೆ ಬಗ್ಗೆ ಅಧ್ಯಯನ ಕೈಗೊಳ್ಳುವ ಸಂಬಂಧ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಲಾಗಿರುವ ನೂತನ ವಿಭಾಗದ ಡೀನ್ ಆಗಿ ಭಾರತೀಯ–ಅಮೆರಿಕನ್ ವಿಜ್ಞಾನಿ, ಪ್ರಾಧ್ಯಾಪಕ ಡಾ. ಅರುಣ್ ಮಜುಂದಾರ್ ಅವರನ್ನು ನೇಮಕ ಮಾಡಲಾಗಿದೆ.
ಡಾ.ಮಜುಂದಾರ್ ಅವರು ಕೋಲ್ಕತ್ತದವರು. ಈ ವಿಭಾಗವು ಸೆಪ್ಟೆಂಬರ್ 1ರಿಂದ ಕಾರ್ಯಾರಂಭ ಮಾಡಲಿದೆ. ಜಾಗತಿಕ ಸಮಸ್ಯೆಯಾಗಿರುವ ಹವಾಮಾನ ಬದಲಾವಣೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಈ ನೂತನ ವಿಭಾಗ ಸಂಶೋಧನೆ ಕೈಗೊಳ್ಳುವುದು ಎಂದು ಮಾಧ್ಯಮಗಳು ವರದಿ ಮಾಡಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.