
ಪಿಟಿಐಲಂಡನ್: ಇಂಗ್ಲೆಂಡ್‌ನ ಮ್ಯೂಸಿಯಂನಲ್ಲಿದ್ದ ಭಾರತದ ಕಲಾಕೃತಿಗಳು ಸೇರಿದಂತೆ ಹಲವು ಮೌಲ್ಯಯುತ ವಸ್ತುಗಳನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರನ್ನು ಗುರುವಾರ ಬಂಧಿಸಲಾಗಿದೆ.
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬ್ರಿಸ್ಟಲ್ ಮ್ಯೂಸಿಯಂನಿಂದ ಕಳವಾಗಿದ್ದ 600ಕ್ಕೂ ಅಧಿಕ ಮೌಲ್ಯಯುತ ವಸ್ತುಗಳನ್ನು ಇಟ್ಟುಕೊಂಡಿರುವ ಶಂಕೆಯಡಿ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿ.ಸಿ.ಟಿ.ವಿ ದೃಶ್ಯಗಳನ್ನು ಬಿಡುಗಡೆಗೊಳಿಸಿದ್ದ ಪೊಲೀಸರು, ಅದರಲ್ಲಿದ್ದ ನಾಲ್ವರು ಶಂಕಿತರ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.