ADVERTISEMENT

ಚೀನಾ: ಭಾರತೀಯ ರಾಯಭಾರಿ ಕಚೇರಿಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ

ಪಿಟಿಐ
Published 15 ಆಗಸ್ಟ್ 2021, 9:49 IST
Last Updated 15 ಆಗಸ್ಟ್ 2021, 9:49 IST
ಚೀನಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ನಡೆದ  75ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾರತ ಮೂಲದ ಹಲವಾರು ಮಂದಿ ಭಾಗವಹಿಸಿದರು                                  -ಟ್ವಿಟರ್‌ ಚಿತ್ರ
ಚೀನಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ನಡೆದ  75ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾರತ ಮೂಲದ ಹಲವಾರು ಮಂದಿ ಭಾಗವಹಿಸಿದರು                                  -ಟ್ವಿಟರ್‌ ಚಿತ್ರ   

ಬೀಜಿಂಗ್‌: ಚೀನಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು. ಇಲ್ಲಿನ ಭಾರತದ ರಾಯಭಾರಿ ವಿಕ್ರಮ್‌ ಮಿಸ್ರಿ ಅವರು ಧ್ವಜಾರೋಹಣ ನೆರವೇರಿಸಿದರು.

ಚೀನಾದಲ್ಲಿರುವ ಭಾರತೀಯರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಧ್ವಜಾರೋಹಣದ ಬಳಿಕ ಮಿಸ್ರಿ ಅವರು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಸ್ವಾತಂತ್ರ್ಯ ದಿನಾಚರಣೆಯನ್ನುದ್ದೇಶಿಸಿ ನೀಡಿದ ಭಾಷಣವನ್ನು ಓದಿ ಹೇಳಿದರು.

ರಾಯಭಾರಿ ಕಚೇರಿಯು 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಕ್ಕಳಿಗಾಗಿ ರಾಷ್ಟ್ರ ನಾಯಕರ ಚಿತ್ರ ಬಿಡಿಸುವ ಸ್ಪರ್ಧೆ, ಭಾರತದ 75 ವರ್ಷಗಳ ಸಾಧನೆ ಕುರಿತಾದ ವೆಬಿನಾರ್‌ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿತ್ತು.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.