ADVERTISEMENT

ಎವರೆಸ್ಟ್‌ ಹೆಬ್ಬಾಗಿಲಿನಲ್ಲಿ ಯೋಗ ಕಾರ್ಯಕ್ರಮ

ಪಿಟಿಐ
Published 16 ಜೂನ್ 2019, 19:45 IST
Last Updated 16 ಜೂನ್ 2019, 19:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಠ್ಮಂಡು: ಐದನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಭಾರತೀಯ ರಾಯಭಾರಿ ಕಚೇರಿಯು ನೇಪಾಳದ ಮೌಂಟ್‌ ಎವರೆಸ್ಟ್‌ ಶಿಖರದ ಹೆಬ್ಬಾಗಿಲು ಥ್ಯಾಂಗ್‌ಬೋಚೆಯಲ್ಲಿ ಭಾನುವಾರ ಯೋಗ ಕಾರ್ಯಕ್ರಮ ಹಮ್ಮಿಕೊಂಡಿತ್ತು.

ದೈನಂದಿನ ಜೀವನದಲ್ಲಿ ಯೋಗದ ಮಹತ್ವ ಸಾರಲು ಮತ್ತು ಶಾಂತಿ, ಸೌಹಾರ್ದತೆಗಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದು ರಾಯಭಾರಿ ಕಚೇರಿಯ ಪ್ರಕಟಣೆ ತಿಳಿಸಿದೆ.

ನೇಪಾಳದಲ್ಲಿರುವ ಭಾರತದ ರಾಯಭಾರಿ ಮಂಜೀವ್‌ ಸಿಂಗ್‌ ಪುರಿ, ವಿವಿಧ ಸಂಘಟನೆಗಳ ಸದಸ್ಯರು, ಸ್ಥಳೀಯರು ಹಾಗೂ ವಿದೇಶಿ ಪ್ರವಾಸಿಗರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಎಂದೂ ಹೇಳಿದೆ.

ADVERTISEMENT

ಇದು ಮೌಂಟ್‌ ಎವರೆಸ್ಟ್‌ ಶಿಖರದ ಬೇಸ್‌ ಕ್ಯಾಂಪ್‌ನಲ್ಲಿ ನಡೆದ ಮೊದಲ ಯೋಗ ಕಾರ್ಯಕ್ರಮ.17,600 ಅಡಿ ಎತ್ತರದಲ್ಲಿ ಪರ್ವತಾರೋಹಿಗಳು ಯೋಗಾಸನ ಮಾಡುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.