ಪ್ರಾಧಿನಿಧಿಕ ಚಿತ್ರ
ಐಸ್ಟಾಕ್ ಚಿತ್ರ
ಕರಾಚಿ: ಕಳೆದ ಮೂರು ವರ್ಷಗಳಿಂದ ಪಾಕಿಸ್ತಾನದ ಬಂಧನದಲ್ಲಿದ್ದ ಭಾರತೀಯ ಮೀನುಗಾರರೊಬ್ಬರು ಕರಾಚಿಯ ಜೈಲಿನಲ್ಲಿ ಮೃತಪಟ್ಟಿದ್ದಾರೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಗೌರವ್ ರಾಮ್ ಆನಂದ್ (52) ಮೃತ ವ್ಯಕ್ತಿ.
ಗೌರವ್ ಅವರ ಮೃತದೇಹವು ಜೈಲಿನ ಶೌಚಾಲಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವೈದ್ಯರ ಪರೀಕ್ಷೆ ನಂತರ ವ್ಯಕ್ತಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ ಎಂದು ಜೈಲಿನ ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.
ಎಲ್ಲಾ ಸರ್ಕಾರಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಪಾಕಿಸ್ತಾನ ಜಲಭಾಗದಲ್ಲಿ ಮೀನುಗಾರಿಕೆ ಮಾಡಿದ ಆರೋಪದಡಿ 2022ರಲ್ಲಿ ಗೌರವ್ ಅವರನ್ನು ಬಂಧಿಸಲಾಗಿತ್ತು ಎಂದು ಜೈಲಿನ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.