
ಪಿಟಿಐ
ಕೊಲಂಬೊ: ಅಕ್ರಮ ಮೀನುಗಾರಿಕೆ ಆರೋಪದಲ್ಲಿ ಭಾರತದ 35 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ಭಾನುವಾರ ತಡರಾತ್ರಿ ಬಂಧಿಸಿದೆ.
ಉತ್ತರ ಜಾಫ್ನಾ ಜಿಲ್ಲೆಯ ಕಂಕೆಸಂತುರೈ ಬಳಿ ಜಲಗಡಿಯನ್ನು ಅತಿಕ್ರಮಿಸಿದ ಮೀನುಗಾರರನ್ನು ಬಂಧಿಸಲಾಗಿದೆ ಎಂದು ಶ್ರೀಲಂಕಾ ನೌಕಾಪಡೆಯ ವಕ್ತಾರ ಬುದ್ದಿಕ ಸಂಪತ್ ತಿಳಿಸಿದ್ದಾರೆ.
ಅಕ್ರಮ ಮೀನುಗಾರಿಕೆ ಆರೋಪದ ಅಡಿಯಲ್ಲಿ ಅವರನ್ನು ಬಂಧಿಸಲಾಗಿದ್ದು, ಮುಂದಿನ ಕ್ರಮಕ್ಕಾಗಿ ಅವರ ಉಪಕರಣಗಳನ್ನು ಮೀನುಗಾರಿಕಾ ಅಧಿಕಾರಿಗಳಿಗೆ ಹಸ್ತಾಂತರಿಸಲಿದ್ದೇವೆ ಎಂದು ಹೇಳಿದ್ದಾರೆ.
ಶ್ರೀಲಂಕಾ ನೌಕಾಪಡೆಯು ಕಳೆದ ಒಂದು ತಿಂಗಳಲ್ಲಿ ಭಾರತೀಯ ಮೀನುಗಾರರನ್ನು ಬಂಧಿಸಿರುವ ಎರಡನೇ ಪ್ರಕರಣ ಇದಾಗಿದೆ. ಅಕ್ರಮ ಮೀನುಗಾರಿಕೆ ಆರೋಪದಲ್ಲಿ ಅ.9 ರಂದು 47 ಮೀನುಗಾರರನ್ನು ಬಂಧಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.