ADVERTISEMENT

ಬ್ರಿಟನ್‌ನಲ್ಲಿ ಹಿಂದೂ-ಮುಸ್ಲಿಂ ಘರ್ಷಣೆ; ಹಿಂದೂ ದೇಗುಲ ಧ್ವಂಸ

ಪಿಟಿಐ
Published 19 ಸೆಪ್ಟೆಂಬರ್ 2022, 13:26 IST
Last Updated 19 ಸೆಪ್ಟೆಂಬರ್ 2022, 13:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಲಂಡನ್: ಬ್ರಿಟನ್‌ನ ಲೀಸೆಸ್ಟರ್ ನಗರದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಗುಂಪು ಘರ್ಷಣೆ ವರದಿಯಾಗಿದೆ. ಹಿಂದೂ ದೇಗುಲ ಧ್ವಂಸಗೊಳಿಸಲಾಗಿದೆ.

ಈ ಘಟನೆಯನ್ನು ಬಲವಾಗಿ ಖಂಡಿಸಿರುವ ಬ್ರಿಟನ್‌ನ ಭಾರತದ ರಾಯಭಾರ ಕಚೇರಿಯು ತಪ್ಪಿತ್ತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದೆ.

ಕಳೆದ ತಿಂಗಳು ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ಪಂದ್ಯದ ಬಳಿಕ ಅಭಿಮಾನಿಗಳ ನಡುವೆ ಘರ್ಷಣೆ ನಡೆದಿತ್ತು. ಇದರ ಮುಂದುವರಿದ ಭಾಗವಾಗಿ ಶನಿವಾರ ಹಾಗೂ ಭಾನುವಾರ ಹಿಂಸಾಚಾರ ನಡೆದಿದೆ ಎಂದು ವರದಿಯಾಗಿದೆ.

ಲೀಸೆಸ್ಟರ್‌ನಲ್ಲಿ ಭಾರತೀಯ ಸಮುದಾಯದ ವಿರುದ್ಧ ನಡೆದ ಹಿಂಸಾಚಾರವನ್ನು ಬಲವಾಗಿ ಖಂಡಿಸುತ್ತೇವೆ. ಈ ವಿಚಾರವನ್ನು ಬ್ರಿಟನ್‌ ಅಧಿಕಾರಿಗಳ ಗಮನಕ್ಕೆ ತಂದಿದ್ದು, ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಗಿದೆ. ಅಲ್ಲದೆ ಭಾರತೀಯ ಸಮುದಾಯವರಿಗೆ ರಕ್ಷಣೆ ಒದಗಿಸಲು ಮನವಿ ಮಾಡಲಾಗಿದೆ ಎಂದು ಬ್ರಿಟನ್‌ನ ಭಾರತದ ರಾಯಭಾರ ಕಚೇರಿ ಪ್ರಕಟಣೆ ತಿಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯನ್ನು ಬಂಧಿಸಲಾಗಿದೆ ಎಂದು ಲೀಸೆಸ್ಟರ್‌ಶೈರ್ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.