
ಜೈಲು (ಪ್ರಾತಿನಿಧಿಕ ಚಿತ್ರ)
ಸಿಂಗಪುರ: ವ್ಯಕ್ತಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಭಾರತ ಮೂಲದ ವ್ಯಕ್ತಿಗೆ 14 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
ಜೂನ್‌ನಲ್ಲಿ ಸಿಂಗಪುರದ ರಫೆಲ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದ ವ್ಯಕ್ತಿಯೊಬ್ಬರ ಮೇಲೆ 34 ವರ್ಷದ ಎಲಿಪೆ ಶಿವಾ ನಾಗು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದಿ ಸ್ಟ್ರೈಟ್ಸ್ ಟೈಮ್ಸ್ ವರದಿ ಮಾಡಿದೆ.
ಕೃತ್ಯ ನಡೆದ ಕೂಡಲೇ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ಸಂತ್ರಸ್ತನ ವಯಸ್ಸು ಸೇರಿದಂತೆ ಇತರೆ ವಿವರಗಳನ್ನು ನ್ಯಾಯಾಲಯ ಬಹಿರಂಗಪಡಿಸಿಲ್ಲ.
ಜೂನ್ 18ರಂದು ಸಂತ್ರಸ್ತ ನಾರ್ತ್ ಬ್ರಿಡ್ಜ್ ರಸ್ತೆಯಲ್ಲಿರುವ ರಫೆಲ್ಸ್ ಆಸ್ಪತ್ರೆಗೆ ತನ್ನ ತಾತನನ್ನು ಭೇಟಿಯಾಗಲು ಬಂದಿದ್ದರು ಎಂದು ಡೆಪ್ಯೂಟಿ ಪಬ್ಲಿಕ್ ಪ್ರಾಸಿಕ್ಯೂಟರ್ ಯುಜೀನ್ ಫುವಾ ಹೇಳಿದ್ದಾರೆ.
ಸಂಜೆ 7.30ರ ಸುಮಾರಿಗೆ ಸಂತ್ರಸ್ತ ಶೌಚಾಲಯಕ್ಕೆ ಹೋಗಿದ್ದ ಸಂದರ್ಭದಲ್ಲಿ ಎಲಿಪೆ, ಆತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದರಿಂದಾಗಿ ಸಂತ್ರಸ್ತ ತೀವ್ರ ಆಘಾತಕ್ಕೊಳಗಾಗಿದ್ದಾನೆ ಎಂದು ವರದಿಯಾಗಿದೆ.
ಘಟನೆ ನಡೆದ ಎರಡು ದಿನಗಳ ಬಳಿಕ ಎಲಿಪೆಯನ್ನು ಬಂಧಿಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.