
ಬಂಧನ (ಸಾಂದರ್ಭಿಕ ಚಿತ್ರ)
ನ್ಯೂಯಾರ್ಕ್: ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಪ್ರಯಾಣಿಕರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಭಾರತ ಮೂಲದ, 35 ವರ್ಷದ ಟ್ಯಾಕ್ಸಿ ಚಾಲಕನ ವಿರುದ್ಧ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಬೇಕರ್ಸ್‌ಫೀಲ್ಡ್‌ನಲ್ಲಿ ವಾಸವಿದ್ದ ಸಿಮ್ರಜಿತ್ ಸಿಂಗ್ ಸೆಖೋನ್ ಬಂಧಿತ ಆರೋಪಿ. ಈತ ಬಾಡಿಗೆ ಟ್ಯಾಕ್ಸಿ ಸೇವೆ ಒದಗಿಸುವ ಕಂಪನಿಯೊಂದರಲ್ಲಿ ಚಾಲಕನಾಗಿದ್ದ.
‘ನವೆಂಬರ್ 27ರಂದು ಮಹಿಳೆಯೊಬ್ಬರು ಮನೆಗೆ ಹೋಗಲು ಟ್ಯಾಕ್ಸಿ ಕಾಯ್ದಿರಿಸಿದ್ದರು. ಬಾರ್ ಒಂದರ ಸಮೀಪದಿಂದ ಅವರನ್ನು ಟ್ಯಾಕ್ಸಿಗೆ ಹತ್ತಿಸಿಕೊಂಡಿದ್ದ ಆರೋಪಿ, ಮದ್ಯದ ಅಮಲಿನಲ್ಲಿದ್ದ ಅವರ ಮೇಲೆ ಮಾರ್ಗಮಧ್ಯೆ ಲೈಂಗಿಕ ದೌರ್ಜನ್ಯ ಎಸಗಿದ್ದ’ ಎಂದು ವೆಂಚುರಾ ಕೌಂಟಿಯ ಜಿಲ್ಲಾ ಅಟಾರ್ನಿ ಎರಿಕ್ ನಸರೆಂಕೊ ಪ್ರಕಣೆಯಲ್ಲಿ ತಿಳಿಸಿದ್ದಾರೆ.
ಸೋಮವಾರ ಆರೋಪಿಯನ್ನು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಲಾಯಿತು. ಸದ್ಯ ಆತ ಪೊಲೀಸ್ ಕಸ್ಟಡಿಯಲ್ಲಿದ್ದಾನೆ. ಜಾಮೀನು ಪಡೆಯಲು ₹4.48 ಕೋಟಿ ಭದ್ರತಾ ಠೇವಣಿ ನಿಗದಿಪಡಿಸಲಾಗಿದೆ. ಮುಂದಿನ ವಿಚಾರಣೆ ಡಿ.29ಕ್ಕೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.