ADVERTISEMENT

ಭಾರತ ಮೂಲದ ವ್ಯಕ್ತಿಗೆ ಚಾಕುವಿನಿಂದ ಇರಿದು ಹತ್ಯೆ

ಪಿಟಿಐ
Published 18 ಜೂನ್ 2023, 14:04 IST
Last Updated 18 ಜೂನ್ 2023, 14:04 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಲಂಡನ್‌ : ಲಂಡನ್‌ನಲ್ಲಿ ಭಾರತೀಯ ಮೂಲದ 38 ವರ್ಷದ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಈಚೆಗೆ ಹೈದರಾಬಾದ್ ಮೂಲದ ಯುವತಿ ಹಾಗೂ ಮತ್ತೊಬ್ಬ ಯುವಕನನ್ನು ಹತ್ಯೆ ಮಾಡಲಾಗಿತ್ತು.

ಅರವಿಂದ ಶಶಿಕುಮಾರ್ ಹತ್ಯೆಯಾಗಿರುವ ವ್ಯಕ್ತಿ. ಇರಿತದ ಗಾಯಗಳೊಂದಿಗೆ ಆತನ ಶವ ಸೌತ್‌ ಆಂಪ್ಟನ್‌ವೇಯ ನಿವಾಸದಲ್ಲಿ ಪತ್ತೆಯಾಗಿದೆ. ಪೊಲೀಸರು ಕೊಲೆ ಆರೋಪದ ಮೇಲೆ ಸಲ್ಮಾನ್‌ ಸಲೀಂ ಎಂಬಾತನನ್ನು ವಶಕ್ಕೆ ಪಡದಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT