ಸಾಬಿಹ್ ಖಾನ್
ಚಿತ್ರ ಕೃಪೆ : ಎಕ್ಸ್
ನವದೆಹಲಿ: ಮೊಬೈಲ್ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಅಮೆರಿಕದ ಆ್ಯಪಲ್ ಕಂಪನಿಯು ತನ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ (COO) ಭಾರತ ಮೂಲಕ ಸಾಬಿಹ್ ಖಾನ್ (58) ಅವರನ್ನು ನೇಮಕ ಮಾಡಿದೆ.
ಕಳೆದ 30 ವರ್ಷಗಳಿಂದ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಖಾನ್ ಅವರು ಪ್ರಸ್ತುತ ಕಾರ್ಯನಿರ್ವಹಣಾ ವಿಭಾಗದ ಹಿರಿಯ ಉಪಾಧ್ಯಕ್ಷರಾಗಿದ್ದಾರೆ. ಈ ತಿಂಗಳ ಕೊನೆಯಲ್ಲಿ ನಿವೃತ್ತಿಯಾಗಲಿರುವ ಸಿಒಒ ಜೆಫ್ ವಿಲಿಯಮ್ಸ್ ಅವರ ಜಾಗಕ್ಕೆ ಖಾನ್ ನೇಮಕಗೊಳ್ಳುತ್ತಿದ್ದಾರೆ.
1966ರಲ್ಲಿ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಜನಿಸಿದ್ದ ಖಾನ್, ತಮ್ಮ ಶಾಲಾ ಶಿಕ್ಷಣವನ್ನು ಸಿಂಗಪುರದಲ್ಲಿ ಪೂರೈಸಿದ್ದರು. ನಂತರ ಅಮೆರಿಕದಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಉನ್ನತ ಪದವಿ ಪಡೆದಿದ್ದಾರೆ.
3 ದಶಕಗಳ ಕಾಲ ಆ್ಯಪಲ್‌ನಲ್ಲಿ ಸೇವೆ ಸಲ್ಲಿಸಿರುವ ಖಾನ್, 2019ರಲ್ಲಿ ಕಾರ್ಯನಿರ್ವಹಣಾ ವಿಭಾಗದ ಹಿರಿಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದರು.
ಕಳೆದ ಆರು ವರ್ಷಗಳಿಂದ ಖಾನ್ ಅವರು ಆ್ಯಪಲ್ ಉತ್ನನ್ನಗಳ ಜಾಗತಿಕ ಪೂರೈಕೆ ಸರಪಳಿ, ಯೋಜನೆ, ಸಂಗ್ರಹಣೆ, ಉತ್ಪಾದನೆ, ಲಾಜಿಸ್ಟಿಕ್ಸ್ ಮತ್ತು ಉತ್ಪನ್ನ ಪೂರೈಕೆಯ ಮೇಲ್ವಿಚಾರಣೆ ನಡೆಸುತ್ತಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.