
ಪಿಟಿಐ
ಬಂಧನ (ಸಾಂದರ್ಭಿಕ ಚಿತ್ರ)
ಹ್ಯೂಸ್ಟನ್: ಮನೆಗೆ ಬೆಂಕಿ ಹಚ್ಚಲು ಪ್ರಯತ್ನಿಸಿದ ಹಾಗೂ ಕುಟುಂಬ ಸದಸ್ಯರಿಗೆ ಭಯೋತ್ಪಾದನೆ ರೀತಿಯ ಬೆದರಿಕೆ ಹಾಕಿದ ಆರೋಪದಡಿ, ಭಾರತೀಯ ಸಂಜಾತ ಮನೋಜ್ ಸಾಯಿ ಲೆಲ್ಲಾ (22) ಎಂಬವರನ್ನು ಅಮೆರಿಕದ ಫ್ರಿಸ್ಕೊ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಡಲ್ಲಾಸ್‌ನ ಟೆಕ್ಸಾಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾದ ಮನೋಜ್ ಕೆಲ ದಿನಗಳ ಹಿಂದೆ ಮನೆಗೆ ಬೆಂಕಿ ಹಚ್ಚಲು ಪ್ರಯತ್ನಿಸಿದ್ದಲ್ಲದೆ, ಬೆದರಿಕೆಯನ್ನೂ ಹಾಕಿದ್ದರು. ಅವರ ಮಾನಸಿಕ ಆರೋಗ್ಯ ಸಮಸ್ಯೆ ಬಗ್ಗೆ ಕುಟುಂಬ ಸದಸ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪೂಜಾ ಮಂದಿರಕ್ಕೆ ಬೆಂಕಿ ಹಚ್ಚಿರುವುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.