ಲಂಡನ್ (ಪಿಟಿಐ): ಉತ್ತರ ಲಂಡನ್ನ ಲೀಡ್ಸ್ ನಗರದಲ್ಲಿ ಕಾರೊಂದು ವೇಗವಾಗಿ ಬಸ್ ನಿಲ್ದಾಣದೊಳಗೆ ನುಗ್ಗಿದ ಪರಿಣಾಮ ತೀವ್ರ ಗಾಯಗೊಂಡಿದ್ದ ಭಾರತೀಯ ಮೂಲದ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವಿದ್ಯಾರ್ಥಿನಿಯನ್ನು ಅಥಿರಾ ಅನಿಲ್ಕುಮಾರ್ ಲಾಲಿ ಕುಮಾರಿ (28) ಎಂದು ಗುರುತಿಸಲಾಗಿದೆ.
ಅಥಿರಾ ಕೇರಳದ ತಿರುವನಂತಪುರ ಮೂಲದವರು. ಕಳೆದ ತಿಂಗಳು ಇಲ್ಲಿನ ಬೆಕೆಟ್ ವಿಶ್ವವಿದ್ಯಾಲಯಕ್ಕೆ ಸೇರ್ಪಡೆಯಾಗಿದ್ದರು ಎಂದು ಸ್ಥಳೀಯ ಮಲಯಾಳಿ ಸಂಘ ತಿಳಿಸಿದೆ.
‘ಫೆ.22ರಂದು ಘಟನೆ ನಡೆದಿದ್ದು, ಈ ವೇಳೆ ಗಾಯಗೊಂಡ ಇನ್ನೊಬ್ಬ ಪಾದಚಾರಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ಕಾರಿನ ಚಾಲಕಿ 25 ವರ್ಷದ ಮಹಿಳೆಯನ್ನು ಬಂಧಿಸಿ, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.