ADVERTISEMENT

ಅಮೆರಿಕದ ಜಿಮ್‌ನಲ್ಲಿ ಚೂರಿ ಇರಿತಕ್ಕೊಳಗಾಗಿದ್ದ ಭಾರತೀಯ ವಿದ್ಯಾರ್ಥಿ ಸಾವು

ಪಿಟಿಐ
Published 9 ನವೆಂಬರ್ 2023, 6:27 IST
Last Updated 9 ನವೆಂಬರ್ 2023, 6:27 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ವಾಷಿಂಗ್ಟನ್: ಅಮೆರಿಕದ ಇಂಡಿಯಾನ ರಾಜ್ಯದ ಜಿಮ್‌ನಲ್ಲಿ ಚೂರಿ ಇರಿತಕ್ಕೊಳಗಾಗಿದ್ದ ಭಾರತೀಯ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ವಾಲ್ಪಾರೈಸೊ ವಿಶ್ವವಿದ್ಯಾಲಯ ಪ್ರಕಟಣೆ ತಿಳಿಸಿದೆ.

24 ವರ್ಷದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ ವರುಣ್ ರಾಜ್ ಪುಚಾ ಮೃತ ವಿದ್ಯಾರ್ಥಿ.

ADVERTISEMENT

ವಿದ್ಯಾರ್ಥಿ ವರುಣ್ ರಾಜ್ ಸಾವಿಗೆ ವಾಲ್ಪಾರೈಸೊ ವಿಶ್ವವಿದ್ಯಾಲಯ ಸಂತಾಪ ಸೂಚಿಸಿದೆ.

ಅಕ್ಟೋಬರ್ 29ರಂದು ಜಿಮ್‌ನಲ್ಲಿ ಜೋರ್ಡಾನ್ ಆಂಡ್ರೇಡ್ ಎಂಬಾತ, ವರುಣ್‌ ತಲೆಗೆ ಚೂರಿಯಿಂದ ಇರಿದಿದ್ದನು. ಬಳಿಕ ಆರೋಪಿಯನ್ನು ಬಂಧಿಸಲಾಯಿತು. ಘಟನೆ ಹಿಂದಿನ ಕಾರಣ ಪತ್ತೆಹಚ್ಚಲು ತನಿಖೆ ಪ್ರಗತಿಯಲ್ಲಿದೆ.

ತೀವ್ರ ಗಾಯಗೊಂಡಿದ್ದ ವರುಣ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.