ಅಪಘಾತ
–ಪ್ರಾತಿನಿಧಿಕ ಚಿತ್ರ
ಲಂಡನ್: ಪೂರ್ವ ಇಂಗ್ಲೆಂಡ್‌ನ ಲೆಸ್ಟೆಶಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ 32 ವರ್ಷದ ಭಾರತೀಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಇತರ ನಾಲ್ವರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಯಾಣಿಸುತ್ತಿದ್ದ ಕಾರು ಹೊಂಡಕ್ಕೆ ಬಿದ್ದಿದ್ದು, ಚಿರಂಜೀವಿ ಪಂಗುರುಲಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೂವರು ಸಹ ಪ್ರಯಾಣಿಕರು ಹಾಗೂ ಚಾಲಕನಿಗೆ ಗಂಭೀರ ಗಾಯ ಉಂಟಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ ಬೆಳಿಗ್ಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಲಿಸೆಸ್ಟರ್‌ನಿಂದ ಮಾರ್ಕೆಟ್ ಹಾರ್ಬೊಗೆ ಕಾರಿನಲ್ಲಿ ಪ್ರಯಾಣಿಸುತ್ತಿರುವಾಗ ಘಟನೆ ನಡೆದಿದೆ. ಲೆಸಿಸ್ಟರ್ ನಿವಾಸಿ ಪಂಗುರುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಮೂವರು ಸಹಪ್ರಯಾಣಿಕರು ಹಾಗೂ ಚಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರು ಸಹಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರೆ ಪ್ರಾಣಕ್ಕೇನೂ ಅಪಾಯ ಇಲ್ಲ ಎಂದು ಪ್ರಕಟಣೆ ತಿಳಿಸಿದೆ.
‘ಘಟನೆ ವೇಳೆ ಇದೇ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ ಯಾರಾದರೂ ಇದ್ದರೆ, ಅಥವಾ ಘಟನೆಯ ವಿಡಿಯೊ ಚಿತ್ರೀಕರಿಸಿದ್ದರೆ ಅವರೊಂದಿಗೆ ಮಾತನಾಡಲು ಪೊಲೀಸರು ಉತ್ಸುಕರಾಗಿದ್ದಾರೆ’ ಎಂದು ಲೆಸ್ಟೆಶಾ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೃತ ವಿದ್ಯಾರ್ಥಿ ಆಂಧ್ರಪ್ರದೇಶ ಮೂಲದವರು ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.