ADVERTISEMENT

ಯುಎಇ: ಭಾರತೀಯ ಮಹಿಳೆ ಸಾವು

ಪಿಟಿಐ
Published 14 ಜುಲೈ 2025, 14:22 IST
Last Updated 14 ಜುಲೈ 2025, 14:22 IST
   

ದುಬೈ: ಅರಬ್‌ ಸಂಯುಕ್ತ ಸಂಸ್ಥಾನದ (ಯುಎಇ) ಶಾರ್ಜಾದಲ್ಲಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಭಾರತೀಯ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಅಲ್‌ ಮಜಾಜ್‌ ಪ್ರದೇಶದಲ್ಲಿ ವಾಸವಿದ್ದ 46 ವರ್ಷದ ಮಹಿಳೆಯೊಬ್ಬರು ತನ್ನ ಮನೆಯಲ್ಲಿ ವಿಶೇಷ ಆಚರಣೆಗೆ ಸಿದ್ಧತೆ ನಡೆಸುತ್ತಿದ್ದಾಗ ಬೆಂಕಿ ಅವಘಡ ಸಂಭವಿಸಿದೆ ಎಂದು ಗಲ್ಫ್‌ ನ್ಯೂಸ್‌ ವರದಿ ಮಾಡಿದೆ.

ಮೃತಪಟ್ಟ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಆಕೆ ಭಾರತೀಯಳು ಎಂಬುದು ಮಾತ್ರ ಗೊತ್ತಾಗಿದೆ ಎಂದು ಅಧಿಕಾರಿಗಳ ಮಾಹಿತಿಯನ್ನು ಉಲ್ಲೇಖಿಸಿದೆ.

ADVERTISEMENT

ಹನ್ನೊಂದು ಅಂತಸ್ತಿನ ಬಹುಮಹಡಿ ಕಟ್ಟಡದ ಎಂಟನೇ ಮಹಡಿಯಲ್ಲಿ ಗುರುವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಮಹಿಳೆ ವಾಸವಿದ್ದ ಫ್ಲ್ಯಾಟ್‌ಗೆ ಅಗ್ನಿ ಆವರಿಸಿದ್ದರಿಂದ ಮಹಿಳೆ ಮೃತಪಟ್ಟಿದ್ದಾರೆ. ಮನೆಗೂ ಹಾನಿಯಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.