ಲಂಡನ್ : ‘ಆರ್ಥಿಕ ಪರಿಸ್ಥಿತಿಗೆ ತಕ್ಕಂತೆ ಹೊಂದಿಕೊಳ್ಳುವ ಗುಣ ಮತ್ತು ದೇಶಿ ಮಾರುಕಟ್ಟೆಯ ಬೇಡಿಕೆಯು ಭಾರತವನ್ನು ಪ್ರಗತಿಯ ಪಥದಲ್ಲಿ ಮುಂದುವರಿಸಲಿದೆ’ ಎಂದು ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿಶ್ವಾಸ ವ್ಯಕ್ತಪಡಿಸಿದರು.
‘2047ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ಆರ್ಥಿಕತೆಯಾಗಲು ಇರುವ ಅವಕಾಶ ಮತ್ತು ಸವಾಲುಗಳು’ ಎಂಬ ವಿಷಯ ಕುರಿತು ಇಲ್ಲಿನ ಭಾರತೀಯ ರಾಯಭಾರ ಕಚೇರಿಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರಸಕ್ತ ಕೇಂದ್ರ ಸಂಪುಟದಲ್ಲಿ ಸಚಿವೆಯಾದ ಬಳಿಕ ಮೊದಲ ಬಾರಿಗೆ ಬ್ರಿಟನ್‌ಗೆ ಭೇಟಿ ನೀಡಿರುವ ಅವರು, ‘ಭಾರತ ಮತ್ತು ಬ್ರಿಟನ್ ನಡುವಣ ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ) ತಡವಾಗಿ ಆದರೂ, ಇದೊಂದು ಉತ್ತಮ ಬೆಳವಣಿಗೆಯಾಗಿದೆ’ ಎಂದು ಹೇಳಿದರು.
ಭಾರತ ಐದು ವರ್ಷಗಳಿಂದ ನಿರಂತರವಾಗಿ ತ್ವರಿತಗತಿಯ ಆರ್ಥಿಕ ಅಭಿವೃದ್ಧಿಯನ್ನು ಕಾಣುತ್ತಿದೆ. ಸದ್ಯದಲ್ಲಿ ವೇಗ ಕಡಿಮೆ ಆಗಿರಬಹುದು. ಮುಂದೆ ನಿರೀಕ್ಷಿತ ಪ್ರಗತಿಯನ್ನು ಕಾಯ್ದುಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.