ADVERTISEMENT

ಇಂಡೋ–ಪೆಸಿಫಿಕ್‌ ದಬ್ಬಾಳಿಕೆಯಿಂದ ಮುಕ್ತವಾಗಲಿ: ಕ್ವಾಡ್‌

ಪಿಟಿಐ
Published 24 ಸೆಪ್ಟೆಂಬರ್ 2021, 23:02 IST
Last Updated 24 ಸೆಪ್ಟೆಂಬರ್ 2021, 23:02 IST
ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌, ಭಾರತ ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಜಪಾನ್‌ ಪ್ರಧಾನಿ ಯೋಶಿಹಿದೆ ಸುಗಾ
ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌, ಭಾರತ ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಜಪಾನ್‌ ಪ್ರಧಾನಿ ಯೋಶಿಹಿದೆ ಸುಗಾ   

ವಾಷಿಂಗ್ಟನ್‌: ನಾಲ್ಕು ರಾಷ್ಟ್ರಗಳ ‘ಕ್ವಾಡ್’ ಗುಂಪಿನ ನಾಯಕರು ವಾಷಿಂಗ್ಟನ್ ಡಿಸಿಯಲ್ಲಿ ಮೊದಲ ಬಾರಿಗೆ ಇಲ್ಲಿ ಶುಕ್ರವಾರ ಖುದ್ದು ಭೇಟಿಯಾಗಿ, ಕೋವಿಡ್ -19ರಿಂದ ಹಿಡಿದು ಹವಾಮಾನ ಬದಲಾವಣೆಯವರೆಗೆ ಜಗತ್ತು ಎದುರಿಸುತ್ತಿರುವ ಪ್ರಮುಖ ಸವಾಲುಗಳ ಬಗ್ಗೆ ಚರ್ಚೆ ನಡೆಸಿದರು.

ಇಂಡೋ-ಪೆಸಿಫಿಕ್ ಪ್ರದೇಶವು ದಬ್ಬಾಳಿಕೆಯಿಂದ ಮುಕ್ತವಾಗಿರಬೇಕು ಎಂದು ಪ್ರತಿಪಾದಿಸಿದ ಕ್ವಾಡ್‌ ರಾಷ್ಟ್ರಗಳ ನಾಯಕರು, ಪರೋಕ್ಷವಾಗಿ ಚೀನಾಕ್ಕೆ ಎಚ್ಚರಿಕೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿ, ‘ನಮ್ಮ ನಾಲ್ಕು ರಾಷ್ಟ್ರಗಳು 2004 ರ ಸುನಾಮಿಯ ನಂತರ ಇಂಡೋ-ಪೆಸಿಫಿಕ್ ಪ್ರದೇಶಕ್ಕೆ ಸಹಾಯ ಮಾಡಲು ಮೊದಲ ಬಾರಿಗೆ ಭೇಟಿಯಾದವು. ಇಂದು, ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧ ಜಗತ್ತು ಹೋರಾಡುತ್ತಿರುವಾಗ, ನಾವು ಮತ್ತೊಮ್ಮೆ ಮನುಕುಲದ ಕಲ್ಯಾಣಕ್ಕಾಗಿ ಇಲ್ಲಿ ಸೇರಿದ್ದೇವೆ. ನಮ್ಮ ಕ್ವಾಡ್ ಲಸಿಕೆ ಉಪಕ್ರಮವು ಇಂಡೋ-ಪೆಸಿಫಿಕ್ ದೇಶಗಳಿಗೆ ಹೆಚ್ಚು ಸಹಾಯ ಮಾಡುತ್ತಿದೆ’ ಎಂದರು.

ADVERTISEMENT

ಅಮೆರಿಕ ಅಧ್ಯಕ್ಷ ಜೋ ಬೈಡನ್, ‘ಎಲ್ಲ ಸವಾಲುಗಳನ್ನು ಎದುರಿಸಲು ಒಟ್ಟಾಗಿದ್ದೇವೆ. ಇವುಗಳನ್ನು ನಿಭಾಯಿಸುವುದು ನಮಗೆ ತಿಳಿದಿದೆ. ಅಲ್ಲದೇ ನಮಗೆ ಎದುರಾಗುವ ಸವಾಲುಗಳನ್ನು ಮೆಟ್ಟಿ ನಿಲ್ಲುತ್ತೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.