ADVERTISEMENT

Ind-Pak Tensions | ಎರಡೂ ದೇಶಗಳು ಶಾಂತಿ, ಸಂಯಮ ಕಾಯ್ದುಕೊಳ್ಳಬೇಕು; ಚೀನಾ

ಪಿಟಿಐ
Published 10 ಮೇ 2025, 7:51 IST
Last Updated 10 ಮೇ 2025, 7:51 IST
<div class="paragraphs"><p>ಚೀನಾ&nbsp;</p></div>

ಚೀನಾ 

   

ಬೀಜಿಂಗ್: ಭಾರತ ಮತ್ತು ಪಾಕಿಸ್ತಾನ ಈ ಸಂದರ್ಭದಲ್ಲಿ ಶಾಂತಿ ಹಾಗೂ ಸಂಯಮವನ್ನು ಕಾಯ್ದುಕೊಳ್ಳಬೇಕು ಎಂದು ಚೀನಾ ಶನಿವಾರ ಒತ್ತಾಯಿಸಿದೆ.

ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನ ಪರಿಸ್ಥಿತಿ ತಾರಕಕ್ಕೆ ಏರಿದೆ. ಪ್ರಸ್ತುತ ಪರಿಸ್ಥಿತಿಯನ್ನು ಚೀನಾ ಸೂಕ್ಷ್ಮವಾಗಿ ಗಮನಿಸುತ್ತಿದೆ. ಭಾರತ ಮತ್ತು ಪಾಕಿಸ್ತಾನ ಶಾಂತಿಯಿಂದ ಮಾತುಕತೆ ನಡೆಸಿ, ಇತ್ಯರ್ಥಪಡಿಸಿಕೊಳ್ಳಬೇಕೆಂದು ಚೀನಾ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ADVERTISEMENT

ಶಾಂತಿಯುತ ಮಾರ್ಗಗಳ ಮೂಲಕ ಉಭಯ ರಾಷ್ಟ್ರಗಳು ಉದ್ವಿಗ್ನ ಪರಿಸ್ಥಿತಿಯನ್ನು ಶಮನಗೊಳಿಸಬೇಕು. ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ನೋಡಿಕೊಳ್ಳಬೇಕು. ಅಂತಹ ಯಾವುದೇ ಕ್ರಮಗಳನ್ನು ಕೈಗೊಳ್ಳದಂತೆ ಎರಡೂ ದೇಶಗಳನ್ನು ಒತ್ತಾಯಿಸುತ್ತೇವೆ ಎಂದು ಚೀನಾ ಹೇಳಿದೆ.

ಭಾರತ ಮತ್ತು ಪಾಕಿಸ್ತಾನ ಎರಡು ದೇಶಗಳಲ್ಲಿ ಶಾಂತಿ ನೆಲಸುವುದು ಮುಖ್ಯವಾಗಿದೆ. ಅಂತರರಾಷ್ಟ್ರೀಯ ಸಮುದಾಯವು ಇದನ್ನೇ ನೋಡಲು ಬಯಸುತ್ತದೆ. ಈ ನಿಟ್ಟಿನಲ್ಲಿ ಚೀನಾ ರಚನಾತ್ಮಕ ಪಾತ್ರವಹಿಸಲು ಸಿದ್ಧವಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ 'ಆಪರೇಷನ್‌ ಸಿಂಧೂರ' ನಡೆಸುವ ಮೂಲಕ ತಕ್ಕ ಉತ್ತರ ನೀಡಿತ್ತು.

ಗುರುವಾರ ತಡರಾತ್ರಿಯೂ ಭಾರತ ಪಾಕಿಸ್ತಾನದ ವಿವಿಧ ನಗರಗಳನ್ನು ಗುರಿಯಾಗಿಸಿ ದಾಳಿ ನಡೆಸುವ ಮೂಲಕ ಪಾಕ್‌ಗೆ ಮತ್ತೊಮ್ಮೆ ತಿರುಗೇಟು ನೀಡಿತ್ತು.

ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಪಂಜಾಬ್, ಗುಜರಾತ್‌. ರಾಜಸ್ಥಾನ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನದಿಂದ ದಾಳಿ ಮುಂದುವರೆದಿದ್ದು, ಭಾರತೀಯ ಸೇನೆ ದಿಟ್ಟ ಪ್ರತಿರೋಧ ಒಡ್ಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.