ADVERTISEMENT

ಇಂಡೊನೇಷ್ಯಾದಲ್ಲಿ ಭೂಕುಸಿತ: ಮೃತರ ಸಂಖ್ಯೆ 126ಕ್ಕೆ ಏರಿಕೆ

ಏಜೆನ್ಸೀಸ್
Published 7 ಏಪ್ರಿಲ್ 2021, 10:28 IST
Last Updated 7 ಏಪ್ರಿಲ್ 2021, 10:28 IST
ಇಂಡೊನೇಷ್ಯಾದಲ್ಲಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯ ಬುಧವಾರವೂ ಮುಂದುವರಿಯಿತು – ಎಎಫ್‌ಪಿ ಚಿತ್ರ
ಇಂಡೊನೇಷ್ಯಾದಲ್ಲಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯ ಬುಧವಾರವೂ ಮುಂದುವರಿಯಿತು – ಎಎಫ್‌ಪಿ ಚಿತ್ರ   

ಲೆಂಬಾಟಾ, ಇಂಡೊನೇಷ್ಯಾ: ಪೂರ್ವ ಇಂಡೊನೇಷ್ಯಾದಲ್ಲಿ ಸಂಭವಿಸಿದ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಮೃತರ ಸಂಖ್ಯೆ 126ಕ್ಕೆ ಏರಿದೆ. ಇನ್ನೂ ಹಲವಾರು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ಹೇಳಿದ್ದಾರೆ.

ಈ ಪ್ರದೇಶದಲ್ಲಿ ಇನ್ನೂ ಮಳೆ ಬೀಳುತ್ತಿದ್ದು, ಪರಿಹಾರ ಕಾರ್ಯ ಹಾಗೂ ನಾಪತ್ತೆಯಾಗಿರುವವರನ್ನು ಹುಡುಕುವುದಕ್ಕೆ ತೊಂದರೆಯಾಗಿದೆ ಎಂದೂ ಅಧಿಕಾರಿಗಳು ಹೇಳಿದ್ದಾರೆ.

ಪ್ರವಾಹದಿಂದಾಗಿ ಇಂಡೊನೇಷ್ಯಾದ ಫ್ಲೋರ್ಸ್‌ ದ್ವೀಪದಿಂದ ಪೂರ್ವ ಟಿಮೋರ್‌ವರೆಗೆ ವ್ಯಾಪಿಸಿರುವ ದ್ವೀಪಗಳಲ್ಲಿ ತೀವ್ರ ಹಾನಿಯಾಗಿದ್ದು, ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ.

ADVERTISEMENT

ಪೂರ್ವ ಫ್ಲೋರ್ಸ್ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಇಲ್ಲಿ ಈ ವರೆಗೆ 67 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, 6 ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.