ಢಾಕಾ: ಮುಂದಿನ ವರ್ಷ ಫೆಬ್ರುವರಿಯಲ್ಲಿ ಸಾರ್ವತ್ರಿಕ ಚುನಾವಣೆ ನಡೆಸುವ ನಿರ್ಧಾರಕ್ಕೆ ಬದ್ಧವಾಗಿರುವುದಾಗಿ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ತಿಳಿಸಿದೆ.
‘ಚುನಾವಣೆ ನಡೆಸುವ ಎಲ್ಲ ಸಿದ್ದತೆಯೊಂದಿಗೆ ಸರ್ಕಾರ ಮುನ್ನಡೆಯುತ್ತಿದೆ’ ಎಂದು ಸರ್ಕಾರದ ಕಾನೂನು ಸಲಹೆಗಾರ ಆಸಿಫ್ ನಝ್ರುಲ್ ತಿಳಿಸಿದ್ದಾರೆ.
ನ್ಯಾಷನಲ್ ಸಿಟಿಜನ್ ಪಾರ್ಟಿ ನಾಯಕರು ಮುಂದಿನ ವರ್ಷದ ಫೆಬ್ರವರಿಯಲ್ಲಿ ಚುನಾವಣೆ ನಡೆಯುವ ಸಾಧ್ಯತೆಯನ್ನು ತಳ್ಳಿಹಾಕಿದ್ದು, ಪ್ರಮುಖ ಸುಧಾರಣೆಗಳು ಮತ್ತು ಮಧ್ಯಂತರ ಸರ್ಕಾರ ಪ್ರಾರಂಭಿಸಿದ ವಿಚಾರಣೆಗಳು ಮುಗಿಯದಿದ್ದರೆ ಚುನಾವಣೆ ಸಾಧ್ಯವಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.