
ಅಯಾತೊಲ್ಲಾ ಅಲಿರೆಜಾ ಅರಾಫಿ
ಟೆಹರಾನ್ (ಇರಾನ್): ಇಸ್ರೇಲ್ ಹಾಗೂ ಅಮೆರಿಕದ ಜಂಟಿ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ. ಖಮೇನಿ ಹತ್ಯೆ ಬೆನ್ನಲ್ಲೇ ಮುಂದಿನ ನಾಯಕ ಯಾರು ಎಂಬ ಪ್ರಶ್ನೆ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.
ಖಮೇನಿ ಅವರ ಪುತ್ರ ಮೊಜ್ತಬಾ ಖಮೇನಿ ಅಧಿಕಾರಕ್ಕೇರಲಿದ್ದಾರೆ ಎಂಬ ಬಲವಾದ ಊಹಾಪೋಹಗಳ ನಡುವೆಯೂ, ಗಾರ್ಡಿಯನ್ ಕೌನ್ಸಿಲ್‌ನ ಧರ್ಮಗುರು ಅಯಾತೊಲ್ಲಾ ಅಲಿರೆಜಾ ಅರಾಫಿ ಅವರನ್ನು ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕರನ್ನಾಗಿ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ.
ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಮತ್ತು ಮುಖ್ಯ ನ್ಯಾಯಮೂರ್ತಿ ಘೋಲಮ್‌ಹೊಸೇನ್ ಮೊಹ್ಸೆನಿ ಎಜೆಯ್ ಅವರಿಗೆ ಸರಿಸಮನಾದ ಹುದ್ದೆಯನ್ನೇ ಅರಾಫಿಗೂ ನೀಡಲಾಗಿದೆ.
ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಶನಿವಾರ ರಾತ್ರಿ ದೊಡ್ಡ ಮಟ್ಟದಲ್ಲಿ ದಾಳಿ ನಡೆಸಿವೆ. ಇರಾನ್ ಕೂಡ ಪ್ರತಿದಾಳಿ ನಡೆಸಿದ್ದು, ಇದರಿಂದ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನ ಸ್ಥಿತಿ ಮನೆ ಮಾಡಿದೆ.
ಇರಾನ್ ಪರಮೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆ ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ‘ಖಮೇನಿ ಎಂಬ ಇತಿಹಾಸದ ಅತ್ಯಂತ ಕ್ರೂರ ವ್ಯಕ್ತಿಗಳಲ್ಲಿ ಒಬ್ಬ ಹತನಾಗಿದ್ದಾನೆ’ ಎಂದು ಟ್ರಂಪ್ ತನ್ನ ಸಾಮಾಜಿಕ ಜಾಲತಾಣ ‘ಟ್ರೂಥ್ ಸೋಶಿಯಲ್’ನಲ್ಲಿ ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.