ಸಾವು
(ಪ್ರಾತಿನಿಧಿಕ ಚಿತ್ರ)
ಜೆರುಸಲೇಂ: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಸೋಮವಾರವೂ ಮುಂದುವರಿದಿದ್ದು, ಉಭಯ ದೇಶಗಳು ಪರಸ್ಪರ ವೈಮಾನಿಕ ದಾಳಿಗಳನ್ನು ನಡೆಸಿವೆ.
ಇಸ್ರೇಲ್‌ನ ಪ್ರಮುಖ ನಗರಗಳಾದ ಟೆಲ್ ಅವೀವ್, ಬೆನೆ ಬ್ರಾಕ್, ಪೆಟಾ ಟಿಕ್ವಾ ಮತ್ತು ಹೈಫಾ ನಗರಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಇದರ ಪರಿಣಾಮ ಇಸ್ರೇಲ್‌ನಲ್ಲಿ ಸೋಮವಾರ 8 ಮಂದಿ ಮೃತಪಟ್ಟಿದ್ದಾರೆ. ಶುಕ್ರವಾರದಿಂದ ನಡೆದಿರುವ ದಾಳಿಯಲ್ಲಿ ಮೃತಪಟ್ಟ ಇಸ್ರೇಲಿಗರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.
ಇರಾನ್ ವಾಯು ದಾಳಿಗೆ ಸಿಲುಕಿದ ಇಸ್ರೇಲ್ ನಗರಗಳ ಪ್ರಮುಖ ರಸ್ತೆಗಳು, ಹಲವು ಕಟ್ಟಡಗಳು ನಾಶವಾಗಿವೆ. ಟೆಲ್ ಅವೀವ್ ನಗರದಲ್ಲಿನ ಅಮೆರಿಕದ ರಾಯಭಾರ ಕಚೇರಿಯ ಕಟ್ಟಡಕ್ಕೂ ಕ್ಷಿಪಣಿ ದಾಳಿಯಿಂದ ಸ್ವಲ್ಪ ಹಾನಿಯಾಗಿದೆ ಎಂದು ಇಸ್ರೇಲ್‌ನಲ್ಲಿರುವ ಅಮೆರಿಕದ ರಾಯಭಾರಿ ಮೈಕ್ ಹಕಬೀ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.