ADVERTISEMENT

ಖಮೇನಿ ಹತ್ಯೆ ಬಳಿಕವೂ ಇಸ್ರೇಲ್, ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ಕ್ಷಿಪಣಿ ದಾಳಿ

ಏಜೆನ್ಸೀಸ್
Published 1 ಮಾರ್ಚ್ 2026, 8:13 IST
Last Updated 1 ಮಾರ್ಚ್ 2026, 8:13 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

– ಎ.ಐ ಚಿತ್ರ

ದುಬೈ: ಸರ್ವೊಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಬಳಿಕವೂ ಇಸ್ರೇಲ್ ಮತ್ತು ಗಲ್ಫ್ ಅರಬ್ ರಾಷ್ಟ್ರಗಳನ್ನು ಗುರಿಯಾಗಿಸಿಕೊಂಡು ಇರಾನ್ ಭಾನುವಾರ ಕ್ಷಿಪಣಿ ದಾಳಿ ನಡಿಸಿದೆ.

ADVERTISEMENT

ಭಾನುವಾರ ಬೆಳವಣಿಗೆ ಬೆನ್ನಲ್ಲೇ, ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಎಚ್ಚರಿಕೆ ನೀಡಿದ್ದಾರೆ.

ಈ ಮಹಾಪಾರಾಧಕ್ಕೆ ಪ್ರತೀಕಾರ ತೀರಿಸಿಯೇ ಸಿದ್ದ ಎಂದು ಇರಾನ್ ಸಂಪುಟ ಹೇಳಿದೆ. ಇಸ್ರೇಲ್ ಮತ್ತು ಅಮೆರಿಕದ ನೆಲೆಗಳನ್ನು ಗುರಿಯಾಗಿಸಿಕೊಂಡು ಕಂಡು ಕೇಳರಿಯದ ದಾಳಿ ನಡೆಸುವುದಾಗಿ ರೆವಲ್ಯೂಷನರಿ ಗಾರ್ಡ್ ಎಚ್ಚರಿಕೆ ನೀಡಿದೆ.

‘ನೀವು ಲಕ್ಷ್ಮಣ ರೇಖೆಯನ್ನು ದಾಟಿದ್ದೀರಿ ಮತ್ತು ಇದಕ್ಕೆ ಬೆಲೆ ತೆರಲೇಬೇಕು’ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಾಗೇರ್ ಕಾಲಿಬಾಫ್ ಭಾನುವಾರ ದೂರದರ್ಶನ ಭಾಷಣದಲ್ಲಿ ಗುಡುಗಿದ್ದಾರೆ.

ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಟ್ರಂಪ್, ‘ಅವರು ಅದನ್ನು ಮಾಡದಿರುವುದು ಒಳಿತು. ಒಂದು ವೇಳೆ ಅವರು ದಾಳಿ ಮಾಡಿದರೆ, ನಾವು ಹಿಂದೆಂದೂ ಕಂಡಿರದ ಬಲದೊಂದಿಗೆ ಅವರ ಪ್ರತ್ಯುತ್ತರ ನೀಡುತ್ತೇವೆ’ ಎಂದು ಸಾಮಾಜಿಕ ಜಾಲತಾಣ ಟ್ರೂಥ್‌ನಲ್ಲಿ ಬರೆದುಕೊಂಡಿದ್ದಾರೆ.

(ವಿವಿಧ ಮೂಲಗಳನ್ನು ಆಧರಿಸಿದ ಬರೆದ ಸುದ್ದಿ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.