ADVERTISEMENT

Iran Protest: 2,000 ಮಂದಿ ಸಾವು; ಭಯೋತ್ಪಾದಕರು ಕಾರಣ ಎಂದ ಅಧಿಕಾರಿಗಳು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಜನವರಿ 2026, 12:54 IST
Last Updated 13 ಜನವರಿ 2026, 12:54 IST
<div class="paragraphs"><p>ಇರಾನ್ ಧ್ವಜ</p></div>

ಇರಾನ್ ಧ್ವಜ

   

ಟೆಹರಾನ್: ಇರಾನ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಈವರೆಗೆ ಸುಮಾರು 2,000 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಅಲ್ಲದೆ ನಾಗರಿಕರು ಮತ್ತು ಭದ್ರತಾ ಸಿಬ್ಬಂದಿಯ ಸಾವಿಗೆ ಭಯೋತ್ಪಾದಕರು ಕಾರಣ ಎಂದು ಇರಾನ್ ಅಧಿಕಾರಿಗಳು ಆರೋಪಿಸಿದ್ದಾರೆ.

ADVERTISEMENT

ಇದು ಭಯೋತ್ಪಾದಕರ ವಿರುದ್ಧದ ಯುದ್ಧ ಎಂದು ಇರಾನ್ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಅಮೆರಿಕ ಮೂಲದ ಮಾನದ ಹಕ್ಕುಗಳ ಕಾರ್ಯಕರ್ತರ ಸುದ್ದಿ ಸಂಸ್ಥೆಯ ವರದಿಯ ಪ್ರಕಾರ, ಇರಾನ್‌ನ 31 ಪ್ರಾಂತ್ಯಗಳಲ್ಲಿ 600ಕ್ಕೂ ಹೆಚ್ಚು ಪ್ರತಿಭಟನೆಗಳು ನಡೆದಿವೆ. ಈವರೆಗೆ 10 ಸಾವಿರಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ಹೇಳಿದೆ.

ಇರಾನ್‌ನಲ್ಲಿ ಇಂಟರ್‌ನೆಟ್ ಹಾಗೂ ದೂರವಾಣಿ ಸಂಪರ್ಕ ಕಡಿತಗೊಳಿಸಲಾಗಿದೆ. ಇದರಿಂದಾಗಿ ಪ್ರತಿಭಟನೆ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕುವುದು ಕಷ್ಟಕರವಾಗಿದೆ.

ಪ್ರತಿಭಟನೆಯ ಕುರಿತು ಪತ್ರಕರ್ತರಿಗೆ ವರದಿ ಮಾಡಲು ಸಾಧ್ಯವಾಗುತ್ತಿಲ್ಲ. ಆರ್ಥಿಕ ಕುಸಿತದ ವಿರುದ್ಧ ಆರಂಭವಾದ ಪ್ರತಿಭಟನೆ ದೇಶದಾದ್ಯಂತ ಪಸರಿಸಿದೆ.

ಈ ನಡುವೆ ಪ್ರತಿಭಟನಾಕಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಎಚ್ಚರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.