
ಇರಾನ್ ಧ್ವಜ
ನವದೆಹಲಿ: ಇರಾನ್‌ನಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ನಾಗರಿಕರು ದೇಶ ಬಿಟ್ಟು ತೆರಳುವಂತೆ ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಇಂದು (ಬುಧವಾರ) ಸಲಹೆ ನೀಡಿದೆ.
ಈ ಕುರಿತು ಇರಾನ್‌ನಲ್ಲಿ ಭಾರತೀಯ ರಾಯಭಾರ ಕಚೇರಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಇರಾನ್‌ನಲ್ಲಿರುವ ಭಾರತೀಯ ವಿಧ್ಯಾರ್ಥಿಗಳು, ಯಾತ್ರಾರ್ಥಿಗಳು, ಉದ್ಯಮಿಗಳು ಹಾಗೂ ಪ್ರವಾಸಿಗರು ಸೇರಿದಂತೆ ಭಾರತೀಯರು ಲಭ್ಯವಿರುವ ಮಾರ್ಗಗಳ ಮೂಲಕ ಇರಾನ್‌ನಿಂದ ತೆರಳುವಂತೆ ನಿರ್ದೇಶನ ನೀಡಿದೆ.
ಭಾರತೀಯ ನಾಗರಿಕರು ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ. ಪ್ರತಿಭಟನೆ ನಡೆಯುವ ಸ್ಥಳಗಳಿಗೆ ಹೋಗಬಾರದು. ಸದಾ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಬೇಕು. ಸ್ಥಳೀಯ ಮಾಧ್ಯಮಗಳ ಮೇಲೆ ನಿಗಾ ವಹಿಸಬೇಕು ಎಂದಿದೆ.
ಪಾಸ್‌ಪೋರ್ಟ್, ಗುರುತಿನ ಚೀಟಿ, ಪ್ರಯಾಣ ಹಾಗೂ ವಲಸೆ ದಾಖಲಾತಿಗಳನ್ನು ಸುಲಭವಾಗಿ ಲಭ್ಯವಿರುವಂತೆ ಎಲ್ಲ ನಾಗರಿಕರು ನೋಡಿಕೊಳ್ಳಬೇಕು. ಯಾವುದೇ ಸಹಾಯಕ್ಕಾಗಿ ರಾಯಭಾರ ಕಚೇರಿಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.
ತುರ್ತು ಸಹಾಯವಾಣಿ ಸಂಖ್ಯೆ:
+989128109115; +989128109109;
+989128109102; +989932179359.
ಇಮೇಲ್: cons.tehranomsa.gov.in
ಇರಾನ್‌ನಲ್ಲಿರುವ ಭಾರತೀಯರಿಗೆ ಈ ಲಿಂಕ್‌ನಲ್ಲಿ (https://www.meaers.com/request/home) ತಮ್ಮ ಹೆಸರನ್ನು ನೋಂದಾಯಿಸಲು ಸೂಚಿಸಲಾಗಿದೆ. ಇರಾನ್‌ನಲ್ಲಿ ಇಂಟರ್‌ನೆಟ್ ಕಡಿದುಕೊಂಡಿರುವ ಹಿನ್ನೆಲೆಯಲ್ಲಿ ಹೆಸರು ನೋಂದಾಯಿಸಲು ಸಾಧ್ಯವಾಗದಿದ್ದರೆ ಅವರ ಪರವಾಗಿ ಭಾರತದಲ್ಲಿರುವ ಅವರ ಕುಟುಂಬದ ಸದಸ್ಯರು ಹೆಸರು ನೋಂದಾಯಿಸುವಂತೆಯೂ ವಿನಂತಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.