
ಪ್ರಜಾವಾಣಿ ವಾರ್ತೆ
ಟೆಹರಾನ್: ಅಮೆರಿಕವನ್ನು ಸಹ ತಲುಪುವ ಸಾಮರ್ಥ್ಯ ಇರುವ ಕ್ಷಿಪಣಿಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂಬ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯನ್ನು ಇರಾನ್ ತಳ್ಳಿ ಹಾಕಿದೆ.
ಇದು ‘ದೊಡ್ಡ ಸುಳ್ಳು’ ಎಂದು ಇರಾನ್‌ನ ವಿದೇಶಾಂಗ ಸಚಿವಾಲಯ ಬುಧವಾರ ತಿಳಿಸಿದೆ.
‘ಇರಾನ್‌ನ ಪರಮಾಣು ಕಾರ್ಯಕ್ರಮ ಮತ್ತು ಖಂಡಾಂತರ ಕ್ಷಿಪಣಿಗಳಿಗೆ ಸಂಬಂಧಿಸಿದಂತೆ ಅಮೆರಿಕ ಆರೋಪಗಳು ‘ದೊಡ್ಡ ಸುಳ್ಳು’ ಎಂದು ಸಚಿವಾಲಯದ ವಕ್ತಾರ ಇಸ್ಮಾಯಿಲ್ ಬಕಾಯಿ ಅವರು ‘ಎಕ್ಸ್’ನಲ್ಲಿ ತಿಳಿಸಿದ್ದಾರೆ.
ಟ್ರಂಪ್ ಅವರು ‘ಅಮೆರಿಕ ತಲುಪಬಲ್ಲ ಕ್ಷಿಪಣಿಗಳನ್ನು ಹೊಂದುವುದನ್ನು ಇರಾನ್ ಎದುರು ನೋಡುತ್ತಿದೆ’ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಅವರು ‘ಎಕ್ಸ್’ನಲ್ಲಿ ಈ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.