ADVERTISEMENT

ಮಧ್ಯಪ್ರಾಚ್ಯದಲ್ಲಿರುವ ಅಮೆರಿಕ ವಾಯುನೆಲೆಗಳ ಮೇಲೆ ಇರಾನ್‌ನಿಂದ ಪ್ರತೀಕಾರದ ದಾಳಿ

ಏಜೆನ್ಸೀಸ್
Published 28 ಫೆಬ್ರುವರಿ 2026, 11:52 IST
Last Updated 28 ಫೆಬ್ರುವರಿ 2026, 11:52 IST
<div class="paragraphs"><p>ಬಹರೈನ್‌ನ ಮನಾಮದಲ್ಲಿ ಸ್ಫೋಟದಿಂದ ಎದ್ದಿರುವ ಹೊಗೆ</p></div>

ಬಹರೈನ್‌ನ ಮನಾಮದಲ್ಲಿ ಸ್ಫೋಟದಿಂದ ಎದ್ದಿರುವ ಹೊಗೆ

   

–ಎಕ್ಸ್ ಚಿತ್ರ

ಅಮೆರಿಕ ಹಾಗೂ ಇಸ್ರೇಲ್ ಸೇರಿ ನಡೆಸಿದ ಜಂಟಿ ದಾಳಿಗೆ ಪ್ರತೀಕಾರವಾಗಿ ‘ಆಪರೇಷನ್ ಟ್ರೂ ಪ್ರಾಮಿಸ್ 4’ ಹೆಸರಿನಲ್ಲಿ ಇರಾನ್ ಪ್ರತಿದಾಳಿ ನಡೆಸಿದೆ.

ADVERTISEMENT

ಪರ್ಷಿಯನ್ ಕೊಲ್ಲಿಯಲ್ಲಿರುವ ಅಮೆರಿಕ ಮತ್ತು ಅದರ ಮಿತ್ರರಾಷ್ಟ್ರಗಳ ಮೂಲಸೌಕರ್ಯ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಡ್ರೋನ್‌ ದಾಳಿ ಮಾಡಿದೆ.

ಬಹ್ರೇನ್‌ನ ಮನಾಮಾದಲ್ಲಿರುವ ಅಮೆರಿಕ ನೌಕಾಪಡೆಯ ‘5ನೇ ಫ್ಲೀಟ್’ ಪ್ರಧಾನ ಕಚೇರಿಯ ಮೇಲೆ ಇಸ್ರೇಲ್ ದಾಳಿ ನಡೆದಿದೆ. ಈ ಪ್ರದೇಶದಲ್ಲಿ ದಟ್ಟ ಹೊಗೆ ಅವರಿಸಿದೆ ಎಂದು ‘ಅಲ್‌ ಜಜೀರಾ’ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ದಾಳಿ ತನ್ನ ಸಾರ್ವಭೌಮತ್ವದ ಮೇಲಿನ ಆಕ್ರಮಣ ಎಂದು ಬಹ್ರೇನ್ ಹೇಳಿದೆ.

ಯುನೈಟೆಡ್ ಅರಬ್ ಎಮಿರೇಟ್ಸ್‌ನ ಅಬುಧಾಬಿಯಲ್ಲಿರುವ ‘ಅಲ್ ದಫ್ರಾ’ ವಾಯುನೆಲೆಯ ಬಳಿ ಸ್ಫೋಟದ ಶಬ್ದಗಳು ಕೇಳಿಬಂದಿವೆ. ಜನವಸತಿ ಪ್ರದೇಶದಲ್ಲಿ ಕ್ಷಿಪಣಿ ನಿರೋಧಕ ವ್ಯವಸ್ಥೆಯ ಅವಶೇಷಗಳು ಬಿದ್ದ ಪರಿಣಾಮ ಓರ್ವ ನಾಗರಿಕ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಕತಾರ್‌ನಲ್ಲಿರುವ ಅಮೆರಿಕದ ಅತಿದೊಡ್ಡ ವಾಯುನೆಲೆ ‘ಅಲ್ ಉದೈದ್’ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದನ್ನು ಪೇಟ್ರಿಯಾಟ್ ವ್ಯವಸ್ಥೆ ಬಳಸಿ ತಡೆಹಿಡಿಯಲಾಗಿದೆ, ವಾಯುನೆಲೆಗೆ ಯಾವುದೇ ಹಾನಿಯಾಗಿಲ್ಲ ಎಂದು ಕತಾರ್ ಅಧಿಕಾರಿಗಳು ತಿಳಿಸಿದ್ದಾರೆ.

ಕುವೈತ್‌ನಲ್ಲಿರುವ ಅಲ್ ಸಾಲೆಮ್ ವಾಯುನೆಲೆಯ ಮೇಲೂ ಇರಾನ್ ದಾಳಿ ನಡೆಸಿದ್ದು, ದಾಳಿ ತಡೆಯಲು ರಕ್ಷಣಾ ವ್ಯವಸ್ಥೆಗಳನ್ನು ಸಕ್ರಿಯಗೊಳಿಸಲಾಗಿದೆ ಎಂದು ಕುವೈಟ್ ತಿಳಿಸಿದೆ.

(ವಿವಿಧ ಸುದ್ದಿ ಏಜೆನ್ಸಿಗಳ ಮಾಹಿತಿ ಆಧರಿಸಿ ಬರೆದ ಸುದ್ದಿ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.