ADVERTISEMENT

ಇರಾನ್ ಮೇಲೆ ಅಮೆರಿಕ ದಾಳಿ 'ಅಪಾಯಕಾರಿ ತಿರುವು' ಪಡೆದುಕೊಂಡಿದೆ: ವಿಶ್ವಸಂಸ್ಥೆ

ಪಿಟಿಐ
Published 23 ಜೂನ್ 2025, 5:39 IST
Last Updated 23 ಜೂನ್ 2025, 5:39 IST
<div class="paragraphs"><p>ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆ</p></div>

ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆ

   

(ರಾಯಿಟರ್ಸ್ ಚಿತ್ರ)

ವಿಶ್ವಸಂಸ್ಥೆ: ಇರಾನ್‌ನ ಮೂರು ಪರಮಾಣು ಘಟಕಗಳ ಮೇಲೆ ಅಮೆರಿಕ ನಡೆಸಿದ ಬಾಂಬ್ ದಾಳಿಯಿಂದ ಮಧ್ಯಪ್ರಾಚ್ಯದಲ್ಲಿನ ಪರಿಸ್ಥಿತಿ 'ಅಪಾಯಕಾರಿ ತಿರುವು' ಪಡೆದುಕೊಂಡಿದೆ ಎಂದು ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರಸ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ADVERTISEMENT

ಭಾನುವಾರ ನಡೆದ ವಿಶ್ವಸಂಸ್ಥೆಯ 15 ರಾಷ್ಟ್ರಗಳ ಭದ್ರತಾ ಮಂಡಳಿಯ ತುರ್ತು ಸಭೆಯ ಬಳಿಕ ಪ್ರತಿಕ್ರಿಯಿಸಿದ ಗುಟೆರಸ್, ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಆರಂಭದಿಂದಲೂ ಯಾವುದೇ ಮಿಲಿಟರಿ ಕಾರ್ಯಾಚರಣೆಯನ್ನು ನಾನು ಖಂಡಿಸುತ್ತಲೇ ಬಂದಿದ್ದೇನೆ ಎಂದು ಹೇಳಿದ್ದಾರೆ.

ಈ ಪ್ರದೇಶದ ಜನರು ಮತ್ತೊಂದು ವಿನಾಶವನ್ನು ಸಹಿಸಲು ಸಾಧ್ಯವಿಲ್ಲ. ಆದರೆ ಈಗ ಪ್ರಚೋದನೆಗೆ ಪ್ರತೀಕಾರದ ಅಪಾಯ ಎದುರಾಗಿದೆ ಎಂದು ಹೇಳಿದ್ದಾರೆ.

'ಈ ಬಿಕ್ಕಟ್ಟನ್ನು ಶಮನಗೊಳಿಸಲು ಅಂತರರಾಷ್ಟ್ರೀಯ ಸಮುದಾಯವು ತಕ್ಷಣವೇ ಕಾರ್ಯಪ್ರವೃತ್ತವಾಗಬೇಕು. ಅಲ್ಲದೆ ಇರಾನ್ ಪರಮಾಣು ಕಾರ್ಯಕ್ರಮದ ಕುರಿತು ಗಂಭೀರ ಮಾತುಕತೆಗೆ ಮರಳಬೇಕು' ಎಂದು ಹೇಳಿದ್ದಾರೆ.

'ಅಂತರರಾಷ್ಟ್ರೀಯ ಶಾಂತಿ ಹಾಗೂ ಭದ್ರತೆಗೆ ಮೂಲ ಆಧಾರವಾಗಿರುವ ಅಣ್ವಸ್ತ್ರ ಪ್ರಸರಣ ನಿಷೇಧ ಒಪ್ಪಂದವನ್ನು ಇರಾನ್ ಸಂಪೂರ್ಣವಾಗಿ ಗೌರವಿಸಬೇಕು' ಎಂದಿದ್ದಾರೆ.

ಭದ್ರತಾ ಮಂಡಳಿಯ ಎಲ್ಲ ಸದಸ್ಯ ರಾಷ್ಟ್ರಗಳು ಸಂಯಮ ಹಾಗೂ ತುರ್ತಾಗಿ ಕಾರ್ಯನಿರ್ವಿಸುವಂತೆ ನಾನು ಒತ್ತಾಯಿಸುತ್ತೇನೆ. ಶಾಂತಿಯ ನಿರೀಕ್ಷೆಯನ್ನು ಕೈಬಿಡಬಾರದು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.