
ಇರಾನ್ ಧ್ವಜ
ಟೆಹರಾನ್: ಇರಾನ್ ಹಾಗೂ ಅಮೆರಿಕ ನಡುವೆ ಉದ್ವಿಗ್ನ ಸ್ಥಿತಿ ಹೆಚ್ಚುತ್ತಿರುವಂತೆಯೇ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯರು ಆದಷ್ಟು ಬೇಗನೇ ದೇಶ ಬಿಟ್ಟು ಹೋಗುವಂತೆ ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಇಂದು (ಸೋಮವಾರ) ಸೂಚಿಸಿದೆ.
ಇದಕ್ಕೆ ಸಮಾನವಾಗಿ ಜನವರಿ 5 ಹಾಗೂ 14ರಂದು ಸಲಹೆಯನ್ನು ಹೊರಡಿಸಿತ್ತು. ಈ ಕುರಿತು ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
ಇರಾನ್‌ನಲ್ಲಿ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳು, ಯಾತ್ರಾರ್ಥಿಗಳು, ಉದ್ಯಮಿಗಳು ಪ್ರವಾಸಿಗರು ಸೇರಿದಂತೆ ಭಾರತೀಯ ನಾಗರಿಕರು ವಿಮಾನ ಸೇರಿದಂತೆ ಲಭ್ಯವಿರುವ ಸಾರಿಗೆ ಮಾರ್ಗಗಳ ಮೂಲಕ ಇರಾನ್‌ನಿಂದ ಹೊರ ಹೋಗುವಂತೆ ಸೂಚಿಸಲಾಗಿದೆ.
ಭಾರತೀಯ ನಾಗರಿಕರು ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ. ಪ್ರತಿಭಟನೆ ನಡೆಯುವ ಸ್ಥಳಕ್ಕೆ ಹೋಗಬಾರದು. ಸದಾ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಬೇಕು. ಸ್ಥಳೀಯ ಮಾಧ್ಯಮಗಳ ಮೇಲೆ ನಿಗಾ ವಹಿಸಬೇಕು ಎಂದಿದೆ.
ಎಲ್ಲ ಭಾರತೀಯ ನಾಗರಿಕರು ಪಾಸ್‌ಪೋರ್ಟ್, ಗುರುತಿನ ಚೀಟಿ, ಪ್ರಯಾಣ ಹಾಗೂ ವಲಸೆ ದಾಖಲಾತಿಗಳನ್ನು ಸುಲಭವಾಗಿ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಯಾವುದೇ ನೆರವಿಗಾಗಿ ರಾಯಭಾರ ಕಚೇರಿಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.
ತುರ್ತು ಸಹಾಯವಾಣಿ ಸಂಖ್ಯೆ:
+989128109115; +989128109109;
+989128109102; +989932179359.
ಇಮೇಲ್: cons.tehranomsa.gov.in
ಇರಾನ್‌ನಲ್ಲಿರುವ ಭಾರತೀಯರಿಗೆ ಈ ಲಿಂಕ್‌ನಲ್ಲಿ (https://www.meaers.com/request/home) ತಮ್ಮ ಹೆಸರನ್ನು ನೋಂದಾಯಿಸಲು ಸೂಚಿಸಲಾಗಿದೆ. ಇಂಟರ್‌ನೆಟ್ ಅಡಚಣೆಯಿಂದಾಗಿ ಹೆಸರು ನೋಂದಾಯಿಸಲು ಸಾಧ್ಯವಾಗದಿದ್ದರೆ ಅವರ ಪರವಾಗಿ ಭಾರತದಲ್ಲಿರುವ ಅವರ ಕುಟುಂಬದ ಸದಸ್ಯರು ಹೆಸರು ನೋಂದಾಯಿಸುವಂತೆಯೂ ವಿನಂತಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.