ADVERTISEMENT

ಇರಾನ್: ‘ಗಲಭೆಗೆ ಪ್ರಚೋದನೆ ನೀಡಿದವರ ವಿರುದ್ಧ ಕಠಿಣ ಕ್ರಮ’

ಏಜೆನ್ಸೀಸ್
Published 25 ಸೆಪ್ಟೆಂಬರ್ 2022, 16:12 IST
Last Updated 25 ಸೆಪ್ಟೆಂಬರ್ 2022, 16:12 IST

ಪ್ಯಾರಿಸ್‌ (ಎಎಫ್‌ಪಿ): ‘ಇರಾನ್‌ನಲ್ಲಿ ನಡೆಯುತ್ತಿರುವ ಹಿಜಾಬ್‌ ವಿರೋಧಿ ಹೋರಾಟದ ವೇಳೆ ಗಲಭೆಗೆ ಪ್ರಚೋದನೆ ನೀಡುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಇರಾನ್‌ ನ್ಯಾಯಾಂಗದ ಮುಖ್ಯಸ್ಥ ಘೋಲಾಮ್‌ಹೊಸೇನಿ ಮೊಹ್ಸೇನಿ ಇಜಿ ಅವರು ಭಾನುವಾರ ಎಚ್ಚರಿಸಿದ್ದಾರೆ.

ಹಿಜಾಬ್‌ ಸರಿಯಾಗಿ ಧರಿಸಿರಲಿಲ್ಲ ಎಂಬ ಕಾರಣಕ್ಕೆ ಮಹಸಾ ಅಮೀನಿ ಎಂಬ ಯುವತಿಯನ್ನು ಇರಾನಿನ ನೈತಿಕ ಪೊಲೀಸರು ಬಂಧಿಸಿದ್ದರು. ಬಳಿಕ ಆಕೆ ಮೃತಪಟ್ಟಿದ್ದಳು. ಇದನ್ನು ಖಂಡಿಸಿ ಮಹಿಳೆಯರು ದೇಶದಾದ್ಯಂತ ಸತತ 9 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಗಲಭೆ ಹಾಗೂ ಹಿಂಸಾಚಾರದಲ್ಲಿ ಈವರೆಗೆ ಒಟ್ಟು 41 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಾಗೂ ಇರಾನಿನ ಪ್ರಸಿದ್ಧ ಚಲನಚಿತ್ರ ನಿರ್ದೇಶಕ ಅಸ್ಗರ್‌ ಫರ್ಹಾದಿ ಅವರು ಮಹಿಳೆಯರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.