ADVERTISEMENT

ಉಕ್ರೇನ್‌ ವಿಮಾನ ಪತನಕ್ಕೆ ಇರಾನ್ ಕ್ಷಿಪಣಿ ದಾಳಿ ಕಾರಣ: ದುರಂತದ ವಿಡಿಯೊ ವೈರಲ್

ಅಮೆರಿಕ ವಿರುದ್ಧ ಪ್ರತೀಕಾರಕ್ಕಾಗಿ ದಾಳಿ

ಏಜೆನ್ಸೀಸ್
Published 10 ಜನವರಿ 2020, 4:41 IST
Last Updated 10 ಜನವರಿ 2020, 4:41 IST
ವಿಮಾನದ ಅವಶೇಷ
ವಿಮಾನದ ಅವಶೇಷ   

ಕೀವ್ (ಉಕ್ರೇನ್):ಉಕ್ರೇನ್‌ ಇಂಟರ್‌ನ್ಯಾಷನಲ್‌ ಏರ್‌ಲೈನ್ಸ್‌ನ ಬೋಯಿಂಗ್ ವಿಮಾನ ಪತನಗೊಳ್ಳಲು ಇರಾನ್‌ ನಡೆಸಿದ ಕ್ಷಿಪಣಿ ದಾಳಿಯೇ ಕಾರಣ ಎಂದು ಅಂತರರಾಷ್ಟ್ರೀಯ ಮಾಧ್ಯಮಗಳುವರದಿ ಮಾಡಿವೆ. ವಿಮಾನಕ್ಕೆ ಕ್ಷಿಪಣಿ ಬಡಿದ ಸಂದರ್ಭದ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇರಾಕ್‌ನಲ್ಲಿರುವಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್‌ ಹಾರಿಸಿದ್ದ ಕ್ಷಿಪಣಿಗಳ ಪೈಕಿ ಒಂದು ಆಕಸ್ಮಿಕವಾಗಿ ವಿಮಾನಕ್ಕೆ ಬಡಿದು ದುರಂತ ಸಂಭವಿಸಿದೆಎಂದು ಅಮೆರಿಕ, ಕೆನಡಾ ಹಾಗೂ ಇಂಗ್ಲೆಂಡ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜನವರಿ 8ರಂದು ಇರಾನ್ ರಾಜಧಾನಿ ಟೆಹರಾನ್‌ನಿಂದ ಉಕ್ರೇನ್‌ನ ಕೀವ್‌ಗೆ ಹೊರಟಿದ್ದ ಉಕ್ರೇನ್‌ ಇಂಟರ್‌ನ್ಯಾಷನಲ್‌ ಏರ್‌ಲೈನ್ಸ್‌ನ ಬೋಯಿಂಗ್ 737 ವಿಮಾನವು ಪತನಗೊಂಡಿತ್ತು. ಅದರಲ್ಲಿದ್ದ 168 ಪ್ರಯಾಣಿಕರು ಮತ್ತು 9 ಸಿಬ್ಬಂದಿ ಮೃತಪಟ್ಟಿದ್ದರು.ವಿಮಾನದಲ್ಲಿ 63 ಮಂದಿ ಕೆನಡಾ ಪ್ರಯಾಣಿಕರಿದ್ದರು. ಸದ್ಯದ ಮಾಹಿತಿಯನ್ನು ಉಲ್ಲೇಖಿಸಿ ಮಾತನಾಡಿರುವ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರೂಡಿ, ಅನುಮಾನಗಳನ್ನು ಬದಿಗಿಟ್ಟು, ಉನ್ನತ ಮಟ್ಟದ ತನಿಖೆ ಕೈಗೊಳ್ಳಬೇಕು ಎಂದು ಕರೆ ನೀಡಿದ್ದಾರೆ.

ಒಟ್ಟಾವಾದಲ್ಲಿ ಸುದ್ದಿಗೋಷ್ಠಿ ನಡೆಸಿರುವ ಅವರು, ‘ಇದು ಆಕಸ್ಮಿಕವಾಗಿ ಸಂಭವಿಸಿದ ದುರಂತ ಎಂದು ನಾವು ಪರಿಗಣಿಸುತ್ತೇವೆ. ಸದ್ಯ ದೊರೆತಿರುವ ಸಾಕ್ಷ್ಯಗಳು ಅಪಘಾತಕ್ಕೆ ಸಂಭವನೀಯ ಕಾರಣ ಏನೆಂಬುದನ್ನು ಸ್ಪಷ್ಟವಾಗಿ ಸೂಚಿಸುತ್ತಿವೆ’ ಎಂದೂ ಹೇಳಿದ್ದಾರೆ.

ಜನವರಿ 3ರಂದು ಇರಾಕ್‌ ರಾಜಧಾನಿ ಬಾಗ್ದಾದ್ ವಿಮಾನ ನಿಲ್ದಾಣದ ಸಮೀಪ ಅಮೆರಿಕ ನಡೆಸಿದ್ದ ಮೇಜರ್ ಜನರಲ್ ಖಾಸಿಂ ಸುಲೇಮಾನಿ ಸೇರಿ 8 ಮಂದಿಮೃತಪಟ್ಟಿದ್ದರು. ಈ ಪ್ರಕರಣದ ಬಳಿಕ ಉಭಯ ದೇಶಗಳ ನಡುವಣ ಉದ್ವಿಗ್ನ ವಾತಾವರಣ ಸೃಷ್ಠಿಯಾಗಿತ್ತು. ಅಮೆರಿಕ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲುಇರಾನ್‌ ಖಂಡಾಂತರ ಕ್ಷಿಪಣಿಗಳನ್ನು ಉಡಾಯಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.