ADVERTISEMENT

ಇರಾನ್‌ನ ಉನ್ನತ ಮಟ್ಟದ ಪರಮಾಣು ವಿಜ್ಞಾನಿಯ ಕೊಲೆ

ಏಜೆನ್ಸೀಸ್
Published 27 ನವೆಂಬರ್ 2020, 18:17 IST
Last Updated 27 ನವೆಂಬರ್ 2020, 18:17 IST
ಮೊಹ್ಸಿನ್ ಫಖ್ರಿಜಾದ್
ಮೊಹ್ಸಿನ್ ಫಖ್ರಿಜಾದ್   

ಟೆಹ್ರಾನ್‌: ಇರಾನ್‌ನ ಉನ್ನತ ಮಟ್ಟದ ಪರಮಾಣು ವಿಜ್ಞಾನಿಯನ್ನು ಉತ್ತರ ಇರಾನ್‌ನಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಅಲ್ಲಿನ ಮಾಧ್ಯಮಗಳು ಶುಕ್ರವಾರ ವರದಿ ಮಾಡಿವೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಅವರ ಮೇಲೆ ದಾಳಿ ನಡೆದಿದೆ.

2000ರ ದಶಕದ ಆರಂಭದಲ್ಲಿ ಏಕಾಏಕಿ ನಿಲ್ಲಿಸಲಾದ ಇರಾನ್‌ನ ಮೊದಲ ಪರಮಾಣು ಶಸ್ತ್ರಾಸ್ತ್ರ ಕಾರ್ಯಕ್ರಮದ ಪ್ರೇರಕ ಶಕ್ತಿ ವಿಜ್ಞಾನಿ ಮೊಹ್ಸಿನ್ ಫಖ್ರಿಜಾದ್‌ ಆಗಿದ್ದರು ಎಂದು ಅಮೆರಿಕದ ಗುಪ್ತಚರ ಇಲಾಖೆ ಅಭಿಪ್ರಾಯಪಟ್ಟಿತ್ತು.

ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿಜ್ಞಾನಿ ಮೊಹ್ಸಿನ್‌ ಫಖ್ರಿಜಾದ್‌ ಅವರ ಜೀವ ಉಳಿಸಲು ವೈದ್ಯರು ಪ್ರಯತ್ನಿಸಿದರಾದರೂ, ಅವರು ಬದುಕುಳಿಯಲಿಲ್ಲ ಎಂದು ಇರಾನ್‌ನ ಸರ್ಕಾರಿ ಸುದ್ದಿ ವಾಹಿನಿ ವರದಿ ಮಾಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.