ADVERTISEMENT

ಇರಾಕ್‌ನಲ್ಲಿ ಬಾಂಬ್ ಸ್ಫೋಟ: ಮೃತರ ಸಂಖ್ಯೆ 35ಕ್ಕೆ ಏರಿಕೆ

ರಾಯಿಟರ್ಸ್
Published 20 ಜುಲೈ 2021, 2:01 IST
Last Updated 20 ಜುಲೈ 2021, 2:01 IST
ಸದರ್‌ ಸಿಟಿಯಲ್ಲಿನ ಮಾರುಕಟ್ಟೆಯಲ್ಲಿ ಸಂಭವಿಸಿದ ಸ್ಫೋಟದ ಪರೀಶಿಲನೆ (ಎಎಫ್‌ಪಿ ಚಿತ್ರ)
ಸದರ್‌ ಸಿಟಿಯಲ್ಲಿನ ಮಾರುಕಟ್ಟೆಯಲ್ಲಿ ಸಂಭವಿಸಿದ ಸ್ಫೋಟದ ಪರೀಶಿಲನೆ (ಎಎಫ್‌ಪಿ ಚಿತ್ರ)   

ಬಾಗ್ದಾದ್‌: ಇರಾಕ್‌ ರಾಜಧಾನಿ ಬಾಗ್ದಾದ್‌ನ ಉಪನಗರ ಸದರ್‌ ಸಿಟಿಯಲ್ಲಿನ ಮಾರುಕಟ್ಟೆಯಲ್ಲಿ ಸೋಮವಾರ ಸಂಭವಿಸಿದ ಬಾಂಬ್‌ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.

ಈದ್‌ ಹಬ್ಬಕ್ಕಾಗಿ ಜನರು ಖರೀದಿಯಲ್ಲಿ ತೊಡಗಿದ್ದ ವೇಳೆ ರಸ್ತೆ ಬದಿಯಲ್ಲಿ ಬಾಂಬ್‌ ಸ್ಫೋಟಗೊಂಡಿರುವುದಾಗಿ ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

ಇಸ್ಲಾಮಿಕ್ ಸ್ಟೇಟ್ (ಐಎಸ್‌) ದಾಳಿಯ ಹೊಣೆ ಹೊತ್ತುಕೊಂಡಿದೆ. ಐಎಸ್‌ ಟೆಲಿಗ್ರಾಂ ಚಾನೆಲ್‌ನಲ್ಲಿ ಪೋಸ್ಟ್‌ ಮಾಡಿಕೊಂಡಿದ್ದು, ಅಬು ಹಮ್ಜಾ ಅಲ್‌–ಇರಾಕಿ ಹೆಸರಿನ ಆತ್ಮಾಹುತಿ ಬಾಂಬರ್‌ ತನ್ನನ್ನು ಸ್ಫೋಟಿಸಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ADVERTISEMENT

ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡವರಲ್ಲಿ ಕೆಲವರು ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಘಟನೆ ಖಂಡಿಸಿರುವ ಪ್ರಧಾನಿ ಮುಸ್ತಾಫಾ ಅಲ್‌ –ಖದಿಮಿ ಅವರು ಭಧ್ರತಾ ಪಡೆಗಳ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದು, ಮಾಹಿತಿ ಪಡೆದಿದ್ದಾರೆ ಎಂದು ಪ್ರಧಾನಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.