

ಇಸ್ರೇಲ್ ದಾಳಿಗೆ ತುತ್ತಾಗಿ ನಾಶಗೊಂಡಿರುವ ಗಾಜಾದ ಕಟ್ಟಡಗಳು
ಗಾಜಾ: ಗಾಜಾದಲ್ಲಿ ಇಸ್ರೇಲ್ ಸೇನೆ ಬುಧವಾರ ನಡೆಸಿದ ದಾಳಿಯಲ್ಲಿ ಇಬ್ಬರು ಮಕ್ಕಳು ಮತ್ತು ಮೂವರು ಪತ್ರಕರ್ತರು ಸೇರಿದಂತೆ 11 ಮಂದಿ ಮೃತಪಟ್ಟಿದ್ದಾರೆ.
ಗಾಜಾ ನಗರದ ನೈರುತ್ಯ ಭಾಗದ ಅಲ್ ಜಹ್ರಾ ಪ್ರದೇಶದಲ್ಲಿ ಕಾರಿನ ಮೇಲೆ ನಡೆದ ವಾಯು ದಾಳಿಯಲ್ಲಿ ಪತ್ರಕರ್ತರು ಮೃತಪಟ್ಟಿದ್ದಾರೆ ಎಂದು ಪ್ಯಾಲೆಸ್ಟೀನ್‌ನ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಮೃತರಲ್ಲಿ ಒಬ್ಬರು ಈ ಹಿಂದೆ ಎಎಫ್‌ಪಿ ಸುದ್ದಿ ಸಂಸ್ಥೆಗೆ ಫೋಟೊ ಮತ್ತು ವಿಡಿಯೊ ಜರ್ನಲಿಸ್ಟ್ ಆಗಿ ಕೆಲಸ ಮಾಡಿದ್ದರು.
ತನ್ನ ಸೈನಿಕರ ಜೀವಕ್ಕೆ ಬೆದರಿಕೆಯಾಗಿ ಪರಿಣಮಿಸಿದ ಉಗ್ರನನ್ನು ಹತ್ಯೆಗೈದಿರುವುದಾಗಿ ಇಸ್ರೇಲ್ ಸೇನೆ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.