ಯೆಮೆನ್ ರಾಜಧಾನಿ ಸನಾದಲ್ಲಿರುವ ಹುಥಿ ಬಂಡುಕೋರರ ಸೇನಾ ನೆಲೆಗಳನ್ನು ಗುರಿಯಾಗಿಸಿ ಇಸ್ರೇಲ್ ಪಡೆಗಳು ಭಾನುವಾರ ದಾಳಿ ನಡೆಸಿವೆ
ಎಎಫ್‌ಪಿ ಚಿತ್ರ
ಸನಾ(ಯೆಮೆನ್): ಇಸ್ರೇಲ್ ಪಡೆಗಳು ಯೆಮೆನ್ ರಾಜಧಾನಿ ಸನಾ ಮೇಲೆ ಭಾನುವಾರ ದಾಳಿ ನಡೆಸಿದ್ದು, ಕನಿಷ್ಠ ಇಬ್ಬರು ಮೃತಪಟ್ಟು, ಇತರ 35 ಮಂದಿ ಗಾಯಗೊಂಡಿದ್ದಾರೆ ಎಂದು ಇರಾನ್ ಬೆಂಬಲಿತ ಹುಥಿ ಬಂಡುಕೋರರು ಹೇಳಿದ್ದಾರೆ.
ಬಂಡುಕೋರರ ಹಿಡಿತದಲ್ಲಿರುವ ಸನಾ ನಗರದ ಆಗಸದಲ್ಲಿ ಬೃಹದಾಕಾರದ ಬೆಂಕಿ ಚೆಂಡುಗಳು ಅಬ್ಬರಿಸುತ್ತಿರುವುದು, ದಟ್ಟವಾದ ಕಪ್ಪು ಹೊಗೆ ಹೊರಹೊಮ್ಮುತ್ತಿರುವ ದೃಶ್ಯಗಳು ಕಂಡುಬಂದಿವೆ ಎಂದು ಎಎಫ್‌ಪಿ ವರದಿ ಮಾಡಿದೆ.
‘ಸನಾದಲ್ಲಿರುವ ಹುಥಿ ಬಂಡುಕೋರರ ಸೇನಾ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಅಧ್ಯಕ್ಷರ ಅರಮನೆ, ಎರಡು ವಿದ್ಯುತ್ ಸ್ಥಾವರಗಳು ಹಾಗೂ ಇಂಧನ ಸಂಗ್ರಹಾಗಾರ ಮೇಲೂ ದಾಳಿ ಮಾಡಲಾಗಿದೆ’ ಎಂದು ಇಸ್ರೇಲ್ ಸೇನೆ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.