ಇಸ್ರೇಲ್ ನಡೆಸಿದ ದಾಳಿಯಿಂದ ಗಾಜಾದಲ್ಲಿ ಹಾನಿಗೊಳಗಾದ ಕಟ್ಟಡಗಳು
ರಾಯಿಟರ್ಸ್ ಚಿತ್ರ
ಕೈರೊ: ಗಾಜಾಪಟ್ಟಿಯಲ್ಲಿ ಶನಿವಾರ ರಾತ್ರಿ ಹಾಗೂ ಭಾನುವಾರ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 103 ಮಂದಿ ಮೃತಪಟ್ಟಿದ್ದಾರೆ.
ಗಾಜಾದ ಮೇಲಿನ ನಿಯಂತ್ರಣ ಸಾಧಿಸಲು ಕಳೆದ ಗುರುವಾರದಿಂದ ದಾಳಿ ನಡೆಸುತ್ತಿರುವ ಇಸ್ರೇಲ್ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ರಾತ್ರಿಯಾದ್ಯಂತ ನಡೆದ ದಾಳಿಯಲ್ಲಿ 100 ಜನ ಮೃತಪಟ್ಟಿದ್ದಾರೆ. ಇಸ್ರೇಲಿ ಬಾಂಬ್ ದಾಳಿಯಿಂದಾಗಿ ನಾಗರಿಕ ನೋಂದಣಿ ದಾಖಲೆಯಲ್ಲಿರುವ ಅನೇಕ ಕುಟುಂಬಗಳೇ ನಾಶವಾಗಿವೆ ಎಂದು ಗಾಜಾ ಆರೋಗ್ಯ ಸಚಿವಾಲಯದ ವಕ್ತಾರ ಖಲೀಲ್ ಅಲ್-ಡೆಕ್ರಾನ್ ರಾಯಿಟರ್ಸ್‌ಗೆ ತಿಳಿಸಿದ್ದಾರೆ.
ಇಸ್ರೇಲಿ ಒತ್ತೆಯಾಳುಗಳನ್ನು ಮುಕ್ತಗೊಳಿಸುವಂತೆ ಹಮಾಸ್ ಮೇಲೆ ಒತ್ತಡ ಹೇರಲು, ಇಸ್ರೇಲ್ ಗಾಜಾಗೆ ವೈದ್ಯಕೀಯ, ಆಹಾರ ಮತ್ತು ಇಂಧನ ಸರಬರಾಜುಗಳನ್ನು ನಿರ್ಬಂಧಿಸಿದೆ. ಬದಲಾಗಿ ಪೂರ್ಣ ಗಾಜಾ ಪಟ್ಟಿಯನ್ನು ವಶಪಡಿಸಿಕೊಳ್ಳುವ, ಜನರಿಗೆ ಸಹಾಯ ನೀಡದಂತೆ ಹೇಳಿದೆ.
ಇಸ್ರೇಲ್ ಕದನ ವಿರಾಮಕ್ಕೆ ಪ್ರತಿಯಾಗಿ ಒತ್ತೆಯಾಳುಗಳನ್ನು ಮಾತ್ರ ಬಿಡುಗಡೆ ಮಾಡುವುದಾಗಿ ಹಮಾಸ್ ಹೇಳಿದೆ.
ಅಮೆರಿಕದ ಬೆಂಬಲದೊಂದಿಗೆ ಈಜಿಪ್ಟ್ ಮತ್ತು ಕತಾರ್ ಮಧ್ಯವರ್ತಿಗಳಾಗಿ ಇಸ್ರೇಲ್ ಮತ್ತು ಹಮಾಸ್ ನಡುವೆ ಕದನ ವಿರಾಮ ಮಾತುಕತೆಯನ್ನು ಪ್ರಾರಂಭಿಸಿದ್ದು, ಮಾತುಕತೆಯಲ್ಲಿ ಪ್ರಗತಿಯಾಗಿಲ್ಲ ಎಂದು ಮೂಲಗಳು ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.