ADVERTISEMENT

ಲೆಬನಾನ್‌: ಇಸ್ರೇಲ್‌ ದಾಳಿ, 12 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2026, 16:02 IST
Last Updated 21 ಫೆಬ್ರುವರಿ 2026, 16:02 IST
.
.   

ಬೈರೂತ್‌: ಲೆಬನಾನ್‌ನ ಬೇಕಾ ಕಣಿವೆಯ ಮೇಲೆ ಇಸ್ರೇಲ್‌ ಶುಕ್ರವಾರ ನಡೆಸಿದ ದಾಳಿಯಲ್ಲಿ ಮೂವರು ಮಕ್ಕಳು ಸೇರಿದಂತೆ 12 ಮಂದಿ ಮೃತಪಟ್ಟಿದ್ದಾರೆ. 24 ಮಂದಿ ಗಾಯಗೊಂಡಿದ್ದಾರೆ ಎಂದು ಲೆಬನಾನ್‌ ಆರೋಗ್ಯ ಸಚಿವಾಲಯದ ವರದಿ ತಿಳಿಸಿದೆ.

ಇದೇ ದಿನ ಪ್ಯಾಲೆಸ್ಟೀನಿಯನ್‌ ನಿರಾಶ್ರಿತರ ಶಿಬಿರದ ಮೇಲೆ ನಡೆದ ಪ್ರತ್ಯೇಕ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಲೆಬನಾನ್‌ನ ಭಯೋತ್ಪಾದಕ ಗುಂಪಾದ ಹಿಜ್ಬುಲ್ಲಾ ಕಮಾಂಡ್‌ ಸೆಂಟರ್‌ ಮೇಲೆ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್‌ ತಿಳಿಸಿದೆ. ಹಿಜ್ಬುಲ್ಲಾ ಸಂಘಟನೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.